ಪಾದಯಾತ್ರೆಗೆ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಬದಲು- ಬಸವಜಯ ಮೃತ್ಯುಂಜಯ ಸ್ವಾಮೀಜಿ


ಕೊಪ್ಪಳ : ಕಲ್ಯಾಣ ಕರ್ನಾಟಕ ದಾಟುವುದರೊಳಗೆ ಸರಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ದಾವಣಗೆರೆಯಲ್ಲಿ ನಮ್ಮ ಘೋಷಣಾ ವಾಕ್ಯ ಬದಲಾಗುತ್ತೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಕೊಪ್ಪಳದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿಯ ಪಾದಯಾತ್ರೆ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 1994 ರಿಂದಲೂ ಪಂಚಮಸಾಲಿ ಸಮುದಾಯ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಶುರು ಮಾಡಿದ್ವಿ. ಲಿಂಗಾಯತರಲ್ಲೇ ಹಿಂದುಳಿದ ಪಂಚಮಸಾಲಿ ಸಮುದಾಯಕ್ಕೆ ಸಂವಿಧಾನಿಕ ಹಕ್ಕು ಬೇಕಿದೆ. ಕುರುಬ ಮತ್ತು ವಾಲ್ಮೀಕಿ ಸಮುದಾಯದ ಸದ್ಯ ಮೀಸಲಾತಿಗೆ ದೊಡ್ಡ ಹೋರಾಟ ಆರಂಭಿಸಿವೆ. ಇದೇ ವೇಳೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಹೋರಾಟ ಆರಂಭಿಸಿದ್ದು ಸಮಯೋಚಿತ. ಇದುವರೆಗೆ ಪಂಚಮಸಾಲಿ ಸಮುದಾಯ ನಾಡಿಗಾಗಿ, ರೈತರಿಗಾಗಿ, ಜನತೆಗಾಗಿ ಹೋರಾಟ ಮಾಡಿದೆ ಇದೇ ಮೊದಲ ಬಾರಿಗೆ ತಮ್ಮ ಸಮುದಾಯಕ್ಕಾಗಿ ಹೋರಾಟ ಮಾಡ್ತಿದೆ. ಸಿಎಂ ಯಡಿಯೂರಪ್ಪ ನಿಜವಾಗಿಯೂ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದರೆ ಮೀಸಲಾತಿ ನೀಡಬೇಕು .ಕರ್ನಾಟಕದ 3 ಪ್ರಭಲ ಸಮುದಾಯಕ್ಕೆ ಮೀಸಲಾತಿ ನೀಡಬೇಕಿದೆ. ದಾವಣಗೆರೆ ತಲುಪುವ ಒಳಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಹೋರಾಟದ ತೀವ್ರತೆ ಬದಲಾಗಲಿದೆ. ನಮ್ಮ ಘೋಷ ವಾಕ್ಯಗಳೂ ಬದಲಾಗಲಿವೆ ಎಂದು ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು. ಪಕ್ಷಾತೀತವಾಗಿ ಎಲ್ಲ ನಾಯಕರು ಜನಪ್ರತಿನಿಧಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿ್ದಾರೆ. ಕೊಪ್ಪಳ ಜಿಲ್ಲೆಯ ಅಮರೇಗೌಡ ಪಾಟೀಲ್ ಬಯ್ಯಾಪೂರ, ದೊಡ್ಡನಗೌಡ ಪಾಟೀಲ್, ಬಸವರಾಜ ರಾಯರೆಡ್ಡಿ ಸೇರಿದಂತೆ ಎಲ್ಲರೂ ಬೆಂಬಲ ನೀಡಿದ್ಧಾರೆ. ಸಚಿವರಾದ ಸಿ.ಸಿ.ಪಾಟೀಲ್ ಮತ್ತು ಸಂಸದ ಕರಡಿ ಸಂಗಣ್ಣ ನಮ್ಮ ಪರವಾಗಿ ಸರಕಾರದ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ನಾವು ಯಾವುದೇ ಕಾರಣಕ್ಕೂ ನಮ್ಮ ಸಮುದಾಯದ ಜನಪ್ರತಿನಿಧಿಗಳನ್ನು ರಾಜೀನಾಮೆ ನೀಡಿ ಹೋರಾಟ ಮಾಡಿ ಎಂದು ಹೇಳುವುದಿಲ್ಲ. ಸರಕಾರದೊಳಗೆ ಇದ್ದೇ ಹೋರಾಟ ಮಾಡಿ ಎನ್ನುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಶಿವರಾಮೆಗೌಡ, ವಿಜಯ ಕಾಶಪ್ಪನವರ್, ಜಿಲ್ಲಾಧ್ಯಕ್ಷ ಬಸವರಾಜ್ ಭೂತೆ, ವೀಣಾ ಕಾಶಪ್ಪನವರ, ಕಿಶೋರಿ ಬೂದನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error