ಪುಸ್ತಕಗಳು ಆಯ್ಕೆಗಾಗಿ ಸಲ್ಲಿಸಲು ಆಹ್ವಾನ


ಕಲಬುರಗಿ.-ಏಕಗವಾಕ್ಷಿ ಯೋಜನೆಯಡಿ 2020ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ (2020ರ ಜನವರಿ 1 ರಿಂದ ಜೂನ್ 30ರವರೆಗೆ) ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ/ ಆಂಗ್ಲ/ ಭಾರತೀಯ ಇತರೆ ಭಾಷೆಗಳ ಗ್ರಂಥಗಳನ್ನು ರಾಜ್ಯಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳಿಂದ ಮೊದಲನೇ ಹಂತದಲ್ಲಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು 2020ರ ಜುಲೈ 30 ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, 3ನೇ ಮಹಡಿ, ಕೊಠಡಿ ಸಂಖ್ಯೆ 26, ವಿಕಾಸ ಸೌಧ, ಕಲಬುರಗಿ ಕಚೇರಿ ಸಂಪರ್ಕಿಸಿ


Please follow and like us:
error