ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : FDA ಪರೀಕ್ಷೆಗಳು ಮುಂದೂಡಿಕೆ

ಕನ್ನಡನೆಟ್ ನ್ಯೂಸ್ : ದಿನಾಂಕ : 24-01-2021ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ , ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ , ದಿನಾಂಕ : 24-01-2021ರಂದು ನಡೆಯಬೇಕಾಗಿದ್ದ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ‌

ಆಯೋಗದ ಅಧಿಸೂಚನೆ ಸಂಖ್ಯೆ : ಇ ( 2 ) 3069 / 2019-20 / ಪಿಎಸ್‌ಸಿ , ಇ ( 2 ) 3070 / 2019 20 / ಪಿಎಸ್‌ಸಿ , ಮತ್ತು ಇ ( 2 ) 3071 / 2019-20 / ಪಿಎಸ್ಸಿ ದಿನಾಂಕ : 31-01-2020ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ , ದಿ : 23-01-2021ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ದಿನಾಂಕ : 24-01-2020ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು . ಏತನ್ಮಧ್ಯೆ , ದಿನಾಂಕ : 23-01-2020ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊಂಡ ಮಾಹಿತಿಯ ಪ್ರಕಾರ ದಿನಾಂಕ : 24-01-2021ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ , ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ , ದಿನಾಂಕ : 24-01-2021ರಂದು ನಡೆಯಬೇಕಾಗಿದ್ದ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ . ಪರೀಕೆಗಳ ದಿನಾಂಕವನ್ನು ಮರುನಿಗದಿಪಡಿಸಿ ಮುಂದುವರೆದು , ಸ್ಪರ್ಧಾತ್ಮಕ ಪ್ರಕಟಿಸಲಾಗುವುದೆಂದು ಈ ಮೂಲಕ ತಿಳಿಸಿದ ಜಿ . ಸತ್ಯವತಿ ಕಾರ್ಯದರ್ಶಿ ಕರ್ನಾಟಕ ಲೋಕ ಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Please follow and like us:
error