ಫಲಾನುಭಗಳಿಗೆ ಒದಗಿಸುವ ಸೌಲಭ್ಯ ಕುರಿತ ಸಮಸ್ಯೆಗಳನ್ನು ತಕ್ಷಣವೇ ಇತ್ಯರ್ಥಪಡಿಸಿಕೊಳ್ಳಿ: ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ, ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಲ್ಲಿ ಸಮಸ್ಯೆಗಳಿದ್ದಲ್ಲಿ ಅವುಗಳ ಪರಿಹಾರಕ್ಕೆ ಸಭೆ ಕರೆಯುವವರೆಗೆ ಕಾಯದೇ ಕೂಡಲೇ ಮೇಲಾಧಿಕಾರಿಗಳನ್ನು ಸಂಪರ್ಕಿಸಿ ಇತ್ಯರ್ಥ ಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 2019-20ನೇ ಸಾಲಿನ ವಾರ್ಷಿಕ ಪ್ರಗತಿ ಹಾಗೂ 2020-21ನೇ ಸಾಲಿನ 1ನೇ ತ್ರೆöÊಮಾಸಿಕ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳಲ್ಲಿ ಸದರಿ ಕಾರ್ಯಕ್ರಮದಡಿ ಅಲ್ಪಸಂಖ್ಯಾತರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಇಲಾಖೆಗಳ ನಡುವಿನ ಸಮನ್ವಯತೆ ಕೊರತೆ ಅಥವಾ ಇತರೆ ಕಾರಣಗಳಿಂದಾಗಿ ಹಲವಾರು ಸೌಲಭ್ಯಗಳು ಫಲಾನುಭವಿಗಳನ್ನು ತಲುಪುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ವ್ಯರ್ಥವಾಗುತ್ತದೆ. ಆದ್ದರಿಂದ ಫಲಾನುಭವಿಗಳು ಹಾಗೂ ಕಾರ್ಯಕ್ರಮ ಅನುಷ್ಠಾನಕ್ಕೆ ಯಾವುದೇ ಸಮಸ್ಯೆ ಎದುರಾದಲ್ಲಿ ಕೂಡಲೇ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತನ ಸಿ.ಇ.ಒ ಅವರ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಿ. ಅದಕ್ಕಾಗಿ ತ್ರೆöÊಮಾಸಿಕ ಸಭೆಯವರೆಗೆ ಕಾಯಬೇಡಿ ಎಂದು ಅವರು ಹೇಳಿದರು.
ಮುಸ್ಲಿಂ ಸಮುದಾಯವಲ್ಲದೆ, ಜೈನರು, ಕ್ರಿಶ್ಚಿಯನ್ನರು, ಸಿಖ್ಖರು ಮುಂತಾದವರು ಕೂಡಾ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರುತ್ತಾರೆ. ಯಾವುದೇ ಇಲಾಖೆಯ ಯೋಜನೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶೇ.15 ರಷ್ಟು ಮೀಸಲಾತಿಯನ್ನು ಒದಗಿಸಬೇಕು. ಸಮುದಾಯದ ಅನೇಕರಿಗೆ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳುವ ಕುರಿತು ಮಾಹಿತಿ ಇರುವುದಿಲ್ಲ. ಆದ್ದರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಗ್ರಾಮೀಣ ಮಟ್ಟದಲ್ಲಿ ಶಾಲಾ ಶಿಕ್ಷಕರು, ಯುವಕರು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅತಿ ಹೆಚ್ಚು ಜನರಿಗೆ ಯೋಜನೆಗಳ ಕುರಿತು ತಿಳುವಳಿಕೆ ಮೂಡಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂತಾದ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಉತ್ತಮ ಯೋಜನೆಗಳಿವೆ. ಅವುಗಳನ್ನು ಅರ್ಹರಿಗೆ ತಲುಪಿಸಲು ಲಭ್ಯ ಸಂಪನ್ಮೂಲ, ಅಧಿಕಾರಿಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಫಲಾನುಭವಿಯನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸಿ ಎಂದು ಅವರು ಹೇಳಿದರು.
ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ನೀಡಲಾಗುವ ವಿವಿಧ ಸೌಲಭ್ಯಗಳಿಗೆ ಫಲಾನುಭವಿಗಳು ಜಮೀನು ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಜಮೀನು ಹೊಂದಿರುವ ಬಹುತೇಕರಿಗೆ ಯೋಜನೆಯ ಸ್ವರೂಪದ ಅರಿವಿರುವುದಿಲ್ಲ. ಆದ್ದರಿಂದ ಉಪವಿಭಾಗಾಧಿಕಾರಿಗಳು ಸಂಬAಧಿಸಿದ ತಾಲ್ಲೂಕಿನ ತಹಶೀಲ್ದಾರರು ಹಾಗೂ ಗ್ರಾಮ ಲೆಕ್ಕಿಗರಿಂದ ಅಲ್ಪಸಂಖ್ಯಾತರ ಮಾಹಿತಿಯನ್ನು ಸಂಗ್ರಹಿಸಿ ಅಲ್ಪಸಂಖ್ಯಾತರ ಇಲಾಖೆಗೆ ನೀಡಬೇಕು. ಅಲ್ಲಿಂದ ಸೌಲಭ್ಯವನ್ನು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಇಲಾಖೆಯದ್ದು. ಸರ್ಕಾರ ನೀಡಿದ ಗುರಿಯನ್ನು ಸಾಧಿಸುವುದರೊಂದಿಗೆ ಸರ್ಕಾರ ನಿದಗಿಪಡಿಸಿದ ಮೀಸಲು ಪ್ರಮಾಣವನ್ನು ಸಮರ್ಪಕವಾಗಿ ಅನುಸರಿಸಿ ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸಿಕೊಡಬೇಕು. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಗ್ರಾಮವಾರು ಸೌಲಭ್ಯ ಪಡೆಯುತ್ತಿರುವ ಅಲ್ಪಸಂಖ್ಯಾತರ ಮಾಹಿತಿಯನ್ನು ಸಂಗ್ರಹಿಸುವAತೆ ಇಲಾಖಾ ಅಧಿಕಾರಿಗೆ ಸೂಚಿಸಿದರು.
ಎಲ್ಲಾ ಇಲಾಖೆಗಳ ಯೋಜನೆಗಳ ಕುರಿತು ಮುಖ್ಯವಾದ ಮತ್ತು ಜನರಿಗೆ ತಿಳಿಯಲೇಬೇಕಾದ ನಾಲ್ಕೆöÊದು ಅಂಶಗಳನ್ನು ಪಟ್ಟಿ ಮಾಡಿ, ಅದನ್ನು ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ ಕಚೇರಿ, ತಾಲ್ಲೂಕು ಕಚೇರಿಗಳು ಮುಂತಾದೆಡೆ ನೋಟಿಸ್ ಬೋರ್ಡುಗಳಲ್ಲಿ ಪ್ರಕಟಿಸಿ. ಹೋಬಳಿ ಮಟ್ಟದಲ್ಲಿ ಕ್ರಿಯಾಶೀಲವಾಗಿರುವ, ಸಾಮಾಜಿಕ ಕಳಕಳಿಯಿರುವ ಯುವಕರು, ಸಮುದಾಯದ ಮುಖಂಡರು, ಶಾಲಾ ಶಿಕ್ಷಕರನ್ನು ಒಳಗೊಂಡAತೆ ಸ್ಥಳೀಯ ನೆಟ್‌ವರ್ಕ್ ರಚಿಸಿ, ವಾಟ್ಸಪ್ ಗ್ರೂಪ್‌ಗಳ ಮೂಲಕ ಅತಿಹೆಚ್ಚು ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ತಿಳುವಳಿಕೆ ಮೂಡಿಸಿ. ಸರ್ಕಾರದ ಸೌಲಭ್ಯಗಳನ್ನು ನೀಡುವಾಗ ಅರ್ಜಿ ಆಹ್ವಾನಿಸಿ, ಬಂದ ಅರ್ಜಿಗಳನ್ನು ಪರಿಶೀಲಿಸುವಾಗ ಸರ್ಕಾರ ನಿಗದಿಪಡಿಸಿದ ಶೇಕಡಾವಾರು ಮೀಸಲಾತಿಗೆ ತಕ್ಕಂತೆ ಅರ್ಜಿಗಳು ಬಂದಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇಲ್ಲದಿದ್ದರೆ ಸಂಬAಧಿಸಿದ ಇಲಾಖೆಯನ್ನು ಸಂಪರ್ಕಿಸಿ ಫಲಾನುಭವಿಗಳ ಮಾಹಿತಿ ಪಡೆದು ಅವರಿಗೆ ಸೌಲಭ್ಯ ಒದಗಿಸಿ. ಕಾಗದದ ಮೇಲಿನ ಗುರಿ ಸಾಧನೆಗಿಂತ ವಾಸ್ತವಿಕವಾಗಿ ಅರ್ಹರಿಗೆ ಸೌಲಭ್ಯ ಒದಗಿಸುವುದು ನಮ್ಮ ಕರ್ತವ್ಯವಾಗಬೇಕು ಎಂದು ಅವರು ಹೇಳಿದರು.
ಕೊಪ್ಪಳ ನಗರದಲ್ಲಿ ನಿರ್ಮಾಣವಾಗಬೇಕಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಿಗೆ ಸೂಕ್ತ ಸರ್ಕಾರಿ ನಿವೇಶನವನ್ನು ಒದಗಿಸಿ. ಈಗಾಗಲೇ ಕೆ.ಕೆ.ಆರ್.ಡಿ.ಬಿ ಇಂದ ನಿವೇಶನ ಮಂಜೂರಾಗಿ ಅಂದಾಜು ವೆಚ್ಚ, ನಕ್ಷೆ ಸಿದ್ಧವಾಗಿದ್ದರೆ ಅದನ್ನು ನಗರಸಭೆಗೆ ವರ್ಗಾಯಿಸಿ ನರೇಗಾ ಯೋಜನೆಯಡಿ ನಿರ್ಮಾಣ ಕಾಮಗಾರಿ ಆರಂಭಿಸಿ. ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ/ನಿರ್ಮಾಣವಾಗುವ ಸರ್ಕಾರಿ ಬಹುಮಹಡಿ ಕಟ್ಟಡಗಳಲ್ಲಿ ಕೆಳಮಹಡಿಯನ್ನು ಅಂಗನವಾಡಿಗೆ ಮೀಸಲಿರಿಸುವ ಕುರಿತು ಪರಿಶೀಲಿಸಿ ಮಾಹಿತಿ ನೀಡಿ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಕೃಷಿ ಇಲಾಖೆಯಲ್ಲಿ ಜಿಲ್ಲಾ ಮತ್ತು ರಾಜ್ಯವಲಯದಲ್ಲಿ 16 ಯೋಜನೆಗಳಿದ್ದು, ಅವುಗಳಲ್ಲಿ ಅಲ್ಪಸಂಖ್ಯಾತರಿಗಿರುವ ಯೋಜನೆಗಳ ಸೌಲಭ್ಯವನ್ನು ಸಮುದಾಯವರಿಗೆ ಒದಗಿಸಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭಾಗ್ಯಲಕ್ಷಿö್ಮÃ ಯೋಜನೆಯಲ್ಲಿ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಎಲ್ಲ ಸಮುದಾಯದವರಿಗೂ ಸೌಲಭ್ಯ ನೀಡಲಾಗುತ್ತದೆ. ಅದರಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರಿಗೆ ಸೌಲಭ್ಯ ತಲುಪಿರುವ ಕುರಿತು ಮಾಹಿತಿ ಸಂಗ್ರಹಿಸಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜನನ ಪ್ರಮಾಣದ ಕುರಿತು ಮಾಹಿತಿ ಪಡೆದು ಅದರಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ, ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಜನಿಸಿದ ಹೆಣ್ಣು ಮಗುವಿಗೆ ಭಾಗ್ಯಲಕ್ಷಿö್ಮÃ ಬಾಂಡ್ ವಿತರಿಸಲು ಕ್ರಮ ಕೈಗೊಳ್ಳಿ. ಜಿಲ್ಲಾ ಆರ್.ಸಿ.ಎಚ್.ಓ ಪೋರ್ಟಲ್‌ನಲ್ಲಿ ಭಾಗ್ಯಲಕ್ಷಿö್ಮÃ ಯೋಜನೆಯಡಿ ನೋಂದಣಿ ಮಾಡಿಸಿ. ಉದ್ಯೋಗಿನಿ ಯೋಜನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೂ ಸರ್ಕಾರದ ಸೌಲಭ್ಯ ಒದಗಿಸಿ. ವಿವಿಧ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ಶಿಷ್ಯವೇತನ, ಪ್ರೋತ್ಸಾಹಧನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು. ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಇದ್ದರೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಸಹಾಯದಿಂದ ಬ್ಯಾಂಕುಗಳಲ್ಲಿ ವಿದ್ಯಾರ್ಥಿ ಹೆಸರಲ್ಲಿ ಖಾತೆ ತೆರೆಯಲು ಕ್ರಮ ವಹಿಸಲಾಗುವುದು. ಆದ್ದರಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಎಂದು ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಹಾಯಕ ಆಯುಕ್ತರಾದ ನಾರಾಯಣರಡ್ಡಿ ಕನಕರಡ್ಡಿ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ್, ಡಿಎಸ್‌ಬಿ ಘಟಕದ ಪಿಐ ರವಿ ಉಕ್ಕುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಜಾವೀದ್ ಕೆ.ಕರಂಗಿ, ನಾಮನಿರ್ದೇಶಿತ ಸದಸ್ಯರಾದ ಎಸ್.ಅಮ್ಜದ್ ಪಟೇಲ್, ಮೊಹಮ್ಮದ್ ಸಿರಾಜ್, ಸಿರಾಜುದ್ದೀನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error