ಫಲಾನುಭವಿ ಆಧಾರಿತ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ : DC ವಿಕಾಸ್ ಕಿಶೋರ್ ಸುರಳ್ಕರ್

ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆ : ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ,: ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆಗೆ ಸಂಬAಧಿಸಿದAತೆ ಎಲ್ಲಾ ಇಲಾಖೆಗಳು ಫಲಾನುಭವಿ ಆಧಾರಿತ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಜ.30) ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಡಿಸೆಂಬರ್-2020ರ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆ, ನಿಗಮಗಳಿಗೆ ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ/ವರ್ಗದವರ ಅಭಿವೃದ್ಧಿಗೆ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿ, ಗುರಿ ನಿಗದಿಪಡಿಸಿದೆ. ಅದರೊಂದಿಗೆ ಸರ್ಕಾರದ ಯೋಜನೆಗಳಲ್ಲಿ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಪರಿಶಿಷ್ಟ ಜಾತಿ/ವರ್ಗದ ಫಲಾನುಭವಿಗಳಿಗಾಗಿ ಬೇರೆ ಬೇರೆ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಯ ಲಾಭ ತಲುಪಿಸಬೇಕು. ಗ್ರಾಮೀಣ ಮಟ್ಟದಲ್ಲಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ, ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಕ್ರಮ ವಹಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಾಹಿತಿಯನ್ನು ಸಂಗ್ರಹಿಸಿ ಇಲಾಖೆಗಳ ಯೋಜನೆಗಳವಾರು ಹಾಗೂ ಕೆಟಗರಿವಾರು ಮಾಹಿತಿಯನ್ನು ಎಲ್ಲಾ ಇಲಾಖೆಗಳು ನೀಡಬೇಕು. ಸರ್ಕಾರ ನೀಡುವ ಅನುದಾನ ಬಿಡುಗಡೆಯಾದ ದಿನಾಂಕ, ಫಲಾನುಭವಿಗಳಿಗೆ ತಲುಪಿಸಿದ ದಿನಾಂಕ, ಖರ್ಚಾದ ಮೊತ್ತ, ಬಾಕಿ ಉಳಿದಿರುವ ಅನುದಾನವನ್ನು ಕಾರಣ ಸಹಿತ ಮಾಹಿತಿಯನ್ನು ನೀಡಿ. ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ವಿವಿಧ ಅನುಷ್ಠಾನ ಏಜೆನ್ಸಿಗಳ ಮೂಲಕ ನಿರ್ಮಿಸುತ್ತಿರುವ ವಿವಿಧ ಇಲಾಖೆಗಳ ಕಟ್ಟಡಗಳು, ಭವನಗಳ ಕುರಿತು ಪ್ರತಿ ತಿಂಗಳು ಮಾಹಿತಿ ನೀಡಬೇಕು ಎಂದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಎಲ್ಲಾ ಇಲಾಖೆಗಳು ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳ ಕುರಿತು ಸಂಕ್ಷಿಪ್ತವಾಗಿ ಕಾಲಂಗಳಲ್ಲಿ ವಿವರವಾದ ಮಾಹಿತಿಯನ್ನು ಎನ್.ಐ.ಸಿ ಗೆ ನೀಡಬೇಕು. ಆ ಮಾಹಿತಿಯನ್ನು ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಇದರಿಂದ ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಯ ಲಾಭ ಪಡೆಯಲು ಅನುಕೂಲವಾಗಲಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ವಿದ್ಯಾರ್ಥಿಗಳ ಶುಲ್ಕ, ಪ್ರೋತ್ಸಾಹಧನ ಮುಂತಾದ ಸೌಲಭ್ಯಗಳನ್ನು ಪರಿಶೀಲಿಸಬೇಕು. ಅದಕ್ಕಾಗಿ ಇಲಾಖೆಯಡಿ ಬರುವ ವಸತಿ ನಿಲಯಗಳ ಮೇಲ್ವಿಚಾರಕರ ತಂಡಗಳನ್ನು ರಚಿಸಿ, ಇಲಾಖೆಯಿಂದ ಭರಿಸಲಾದ ಮೊತ್ತದ ಕುರಿತು ಪರಿಶೀಲನೆಗೆ ಕ್ರಮ ಕೈಗೊಳ್ಳಿ. ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿರುವ ಬಗ್ಗೆ ಆರ್.ಆರ್. ಸಂಖ್ಯೆಯುಳ್ಳ ಮಾಹಿತಿಯನ್ನು ನೀಡಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿ.ಪಂ. ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಶಿಂತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲ್ಕನಂದ ಮಳಿಗಿ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error