ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಮಸೀದಿಗಳಲ್ಲಿ ಮಾತ್ರ ಅವಕಾಶ


ಕೊಪ್ಪಳ, : ಈದ್-ಉಲ್-ಅದಾ (ಬಕ್ರೀದ್) ಹಬ್ಬದ ಸಾಮೂಹಿಕ ಪ್ರಾರ್ಥನೆ (ನಮಾಜ)ಗೆ ಮಸೀದಿಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.
ಬಕ್ರೀದ್ ಹಬ್ಬ ಆಚರಿಸುವ ಕುರಿತು ಕೊಪ್ಪಳ ಉಪವಿಭಾಗಾಧಿಕಾರಿ ಸಭಾಂಗಣದಲ್ಲಿ ಬುಧವಾರದಂದು (ಜುಲೈ.29) ಆಯೋಜಿಸಲಾಗಿದ್ದ ನಾಗರಿಕ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  
ಕೋವಿಡ್-19 ಹಿನ್ನೆಲೆ ಸರ್ಕಾರದ ನಿಯಮಗಳನ್ವಯ ಈದ್ಗಾ ಮೈದಾನಗಳಲ್ಲಿ ಈ ಬಾರಿ ಪ್ರಾರ್ಥನೆ ಮಾಡುವಂತಿಲ್ಲ.  ತೆರೆದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಟ್ಟುಗೂಡುವುದನ್ನು ನಿಷೇಧಿಸಲಾಗಿದ್ದು, ಈ ಬಾರಿಯ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು ಮಸೀದಿಗಳಲ್ಲಿ ಮಾತ್ರ ಮಾಡಿಕೊಳ್ಳಬೇಕು ಎಂದು ಸ್ಪಷ್ಟ ಪಡಿಸಲಾಗಿದೆ.  ಸರ್ಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಬಕ್ರೀದ್ ಹಬ್ಬ ಆಚರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.  

Please follow and like us:
error