fbpx

ಲಾರಿ ಹರಿದು ಕುರಿಗಾಹಿ ಸೇರಿದಂತೆ 100ಕ್ಕೂ ಹೆಚ್ಚು ಕುರಿಗಳ ಸಾವು

ಲಾರಿ ಹರಿದು ಕುರಿಗಾಹಿ ಸೇರಿದಂತೆ 100ಕ್ಕೂ ಹೆಚ್ಚು ಕುರಿಗಳು ಮೃತಪಟ್ಟ ಧಾರುಣ ಘಟನೆ ಬಳ್ಳಾರಿಯ ಜಿಲ್ಲೆಯಲ್ಲಿ ಜರುಗಿದೆ. ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ – ಬಳ್ಳಾರಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಬೆಳ್ಳಂಬೆಳಗ್ಗೆ ಕುರಿಗಳನ್ನು ಮೇಯಿಸಲು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಕುರಿಗಾಹಿ ಬಸವ (23) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕುರಿಗಳ ಮೇಲೆ ಲಾರಿ ಹರಿಸಿದ ಪರಿಣಾಮ 100ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿಯೇ ಅಸುನೀಗಿವೆ. ರಸ್ತೆ ತುಂಬ ಕುರಿಗಳು ದೇಹ ಚೆಲ್ಲಾಪಿಲ್ಲಿಯಾಗಿದ್ದು ರಕ್ತ ಹರಿದಿದೆ. ಈ ಅವಘಡ ನಡೆದ ನಂತರ ಲಾರಿ ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಗ್ರಾಮಸ್ಥರ ಸಹಾಯದಿಂದ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾದಿಗನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

Please follow and like us:
error

Leave a Reply

error: Content is protected !!