ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಕರಣ ಲೋಕಾಯುಕ್ತಕ್ಕೆ ನೀಡಿ: ಬಿ.ಸಿ.ಪಾಟೀಲ್

ಜಿಲ್ಲಾ ಪಂಚಾಯತ 2ನೇ ತ್ರೈಮಾಸಿಕ ಕೆ.ಡಿ.ಪಿ ಸಭೆ


ಕೊಪ್ಪಳ, : ಮುಂಡರಗಿ ಹಾಗೂ ಇತರೆ 83 ಗ್ರಾಮಗಳ ಹಂತ-1 ಯೋಜನೆಯಲ್ಲಿ ಕಾಮಗಾರಿ ಪೂರ್ಣಗೊಳ್ಳದೆ ರೂ.45 ಕೋಟಿ ಅನುದಾನ ಬಿಡುಗಡೆಯಾಗಿರುವ ಕುರಿತು ಗೊಂದಲಗಳಿದ್ದು, ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಜಿ.ಪಂ. ಸಿಇಒ ರಘುನಂದನ್ ಮೂರ್ತಿ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರ (ನ.20) ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) 2020-21ನೇ ಸಾಲಿನ 2ನೇ ತ್ರೆöÊಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ತಾಲ್ಲೂಕಿನ ಮುಂಡರಗಿ ಹಾಗೂ ಇತರೆ 83 ಗ್ರಾಮಗಳ ಕಾಮಗಾರಿಗೆ ರೂ.45 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಆದರೆ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಹಾಗೂ ಯಾವುದೇ ಒಂದು ಗ್ರಾಮಕ್ಕೂ ನೀರು ಒದಗಿಸಿಲ್ಲ. ಯೋಜನೆಯ ಟ್ರಯಲ್‌ರನ್ ಹಂತದಲ್ಲಿ ಜಿ.ಆರ್.ಪಿ ಪೈಪುಗಳು ಒಡೆಯುತ್ತಿದ್ದು ಕಾಮಗಾರಿ ನಿಷ್ಕಿçಯಗೊಂಡಿದೆ. ಆದ್ದರಿಂದ ಕಾಮಗಾರಿ ಪೂರ್ಣಗೊಳ್ಳುವ ಮೊದಲು ಅನುದಾನ ಬಿಡುಗಡೆಯಾಗಿರುವ ಕುರಿತು ಅನೇಕ ಗೊಂದಲಗಳು ಮೂಡಿದ್ದು, ಈ ಕುರಿತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಂಬAಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಪೂರ್ಣಗೊಂಡ ಕಾಮಗಾರಿಯ ಪ್ರಮಾಣ, ಬಿಡುಗಡೆಯಾದ ಹಣ ಮತ್ತು ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ಬಗ್ಗೆ ವಿವರವಾದ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು. ಪ್ರಕಣದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಸಂಬAಧಿಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಂಡು, ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಗಳಲ್ಲಿ ನೀಡಲಾಗುವ ಮಾಸಾಶನವನ್ನು ಅರ್ಹರಿಗೆ ನೀಡಬೇಕು. ವಿಧವಾ ವೇತನವನ್ನು 5 ವರ್ಷ, 10 ವರ್ಷಗಳಿಗೆ ಮೀಸಲಿರಿಸಿ ಅವಧಿ ನಂತರ ಫಲಾನುಭವಿ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಬದಲು ವಿಧವಾ ವೇತನ ಕುರಿತು ವರದಿ ಸಲ್ಲಿಸುವಾಗ, ಒಂದು ವೇಳೆ ಮಹಿಳೆಯು ಮತ್ತೊಂದು ಮದುವೆಯಾದಲ್ಲಿ ವಿಧವಾ ವೇತನವನ್ನು ಸ್ಥಗಿತಗೊಳಿಸಲಾಗುವುದು ಎಂಬ ಷರಾ ಬರೆಯಿರಿ. ವೃದ್ಧಾಪ್ಯ ವೇತನ ನೀಡುವಲ್ಲಿ ಫಲಾನುಭವಿಗಳನ್ನು ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ಕೆಲವು ಸಂದರ್ಭದಲ್ಲಿ ವೃದ್ಧರ ಮಕ್ಕಳು ಸರ್ಕಾರಿ ಉದ್ಯೋಗದಲ್ಲಿದ್ದರೂ ಪಾಲಕರಿಂದ ದೂರವಾಗಿ, ಪ್ರತ್ಯೇಕ ವಾಸವಿರುತ್ತಾರೆ. ಮಕ್ಕಳ ಉದ್ಯೋಗದ ಕಾರಣ ನೀಡಿ ಅರ್ಜಿಯನ್ನು ತಿರಸ್ಕರಿಸುವ ಬದಲು ವಿಶೇಷ ಸಂದರ್ಭವೆAದು ಭಾವಿಸಿ ಮಹಜರು ಮಾಡಿ, ನೈಜತೆ ಇದ್ದಲ್ಲಿ ಮಾನವೀಯ ದೃಷ್ಠಿಯಿಂದ ವೃದ್ಧಾಪ್ಯ ವೇತನವನ್ನು ಮಂಜೂರು ಮಾಡಿ ಎಂದು ಅವರು ತಹಶೀಲ್ದಾರರಿಗೆ ತಿಳಿಸಿದರು.
ಅಂಗವಿಕಲರ ವೇತನ ಪಡೆಯುವಲ್ಲಿಯೂ ಅಕ್ರಮ ಕಂಡು ಬರುತ್ತದೆ. ಆರೋಗ್ಯವಂತ ವ್ಯಕ್ತಿ ಸುಳ್ಳು ಪ್ರಮಾಣ ಪತ್ರ ನೀಡಿ ಅಂಗವಿಕಲರ ವೇತನ ಸಹಿತ ಇತರೆ ಸೌಲಭ್ಯಗಳನ್ನು ಪಡೆಯುವುದರಿಂದ ಅರ್ಹ ಫಲಾನುಭವಿಗೆ ಅನ್ಯಾಯವಾಗುತ್ತದೆ. ಇದರ ಬಗ್ಗೆ ಜಿಲ್ಲಾ ಶಸ್ತçಚಿಕಿತ್ಸಕರು ಹಾಗೂ ತಹಶೀಲ್ದಾರರು ವಾರಕ್ಕೊಮ್ಮೆ ನಿರ್ದಿಷ್ಟ ಸಂಖ್ಯೆಯ ಫಲಾನುಭವಿಗಳನ್ನು ಕಚೇರಿಗೆ ಕರೆಯಿಸಿ ನೈಜತೆಯನ್ನು ಪರೀಕ್ಷಿಸಬೇಕು. ಅರ್ಹತೆ ಇದ್ದಲ್ಲಿ ಅಂಗವಿಕಲರ ವೇತನವನ್ನು ಮುಂದುವರೆಸಿ. ಒಂದು ವೇಳೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದು ಸಾಬೀತಾದಲ್ಲಿ ಫಲಾನುಭವಿ ಹಾಗೂ ಸುಳ್ಳು ಪ್ರಮಾಣ ಪತ್ರ ನೀಡಿದ ವೈದ್ಯರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 2019-20, 2020-21 ನೇ ಸಾಲಿನಲ್ಲಿ ಒಟ್ಟು 8 ರೈತ ಆತ್ಮಹತ್ಯೆ ಪ್ರಕರಣಗಳಿಗೆ ಪರಿಹಾರ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ವೈದ್ಯಕೀಯ ವರದಿ ಬರುವುದು ವಿಳಂಬವಾಗಿ, ರೈತ ಕುಟುಂಬಕ್ಕೆ ಪರಿಹಾರ ದೊರೆಯುವುದು ವಿಳಂಬವಾಗುತ್ತದೆ. ಆದ್ದರಿಂದ ಇಂತಹ ಪ್ರಕರಣಗಳಲ್ಲಿ ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸಲು ಪ್ರಯತ್ನಿಸಿ, ಮೃತ ರೈತನ ಪತ್ನಿಗೆ ವಿಧವಾ ವೇತನ, ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ, ಅಗತ್ಯವಿದ್ದಲ್ಲಿ ಸರ್ಕಾರದ ಯೋಜನೆಯಲ್ಲಿ ಮನೆ ಒದಗಿಸಲು ಕ್ರಮ ಕೈಗೊಳ್ಳಿ. ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರು ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಕೂಡಲೇ ಕ್ರಮ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಎಲ್ಲ ಸೌಲಭ್ಯಗಳು, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರದ ಮೂಲಕ ತಿಳುವಳಿಕೆ ಮೂಡಿಸಿ ಎಂದು ಅವರು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಜೆಸ್ಕಾಂ ವತಿಯಿಂದ ವಿವಿಧ ನಿಗಮಗಳ ಯೋಜನೆಗಳ ಮೂಲಕ ರೈತರ ಜಮೀನುಗಳಲ್ಲಿ ಕೊರೆಸಿದ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಒದಗಿಸಬೇಕು. ಜಿಲ್ಲೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿರುವ ಬಗ್ಗೆ, ಮೋಟರ್ ಯಂತ್ರಗಳನ್ನು ನೀಡಿರುವ ಬಗ್ಗೆ, ಆರ್‌ಆರ್ ಸಂಖ್ಯೆ ಸಹಿತ ಡಿಸೆಂಬರ್.25 ರೊಳಗಾಗಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬಂದಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಸಂಘಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು. ಇಂತಹ ಪ್ರಕರಣಗಳು ಕಂಡುಬAದಲ್ಲಿ ಸಂಬAಧಿಸಿದ ಆಹಾರ ಇಲಾಖೆಯ ಶಿರಸ್ತೇದಾರರು ಹಾಗೂ ತಹಶೀಲ್ದಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಪಡಿತರ ಲೈಸೆನ್ಸ್ ಪಡೆದು ಅಕ್ರಮ ಪಡಿತರ ವಿತರಣೆ ಸಾಬೀತಾದಲ್ಲಿ ಸಂಬAಧಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಗ್ರಾಮಗಳ ಖಾಸಗಿ ಬೋರ್‌ವೆಲ್ ಮಾಲೀಕರಿಗೆ ಪಾವತಿಸಬೇಕಾದ ಮೊತ್ತವನ್ನು ಶೀಘ್ರ ಪಾವತಿಸಿ. ವಿಳಂಬ ಮಾಡುವ ಇಒ ಗಳ ವಿರುದ್ಧ ಕ್ರಮ ಕೈಗೊಳ್ಳಿ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಮಾನದಂಡಗಳನ್ನು ಕಡ್ಡಾಯವಾಗಿ ಅನುಸರಿಸಿ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪೂರ ಮಾತನಾಡಿ, 06 ತಿಂಗಳಿAದ 3 ವರ್ಷದ ಮಕ್ಕಳಿಗೆ ಅಂಗನವಾಡಿಗಳಿAದ ನೀಡಲಾಗುವ ಆಹಾರ ಪೊಟ್ಟಣವನ್ನು ಎಮ್‌ಎಸ್‌ಪಿಟಿಸಿ ಸಂಸ್ಥೆಯು ನೀಡುತ್ತಿದೆ. ಪೊಟ್ಟಣದ ಮೇಲೆ ಉತ್ಪನ್ನದ ತಯಾರಿಕೆ ಹಾಗೂ ಬಳಕೆಗೆ ಯೋಗ್ಯವಾದ ಕೊನೆಯ ದಿನಾಂಕವನ್ನು ನಮೂದಿಸುವುದಿಲ್ಲ. ಇದರಿಂದ ಮಕ್ಕಳ ಆರೋಗ್ಯಕ್ಕೆ ಹಾನಿಯಾಗಬಹದು. ಆದ್ದರಿಂದ ಸಂಸ್ಥೆಯನ್ನು ಬದಲಾಯಿಸಿ ಅಥವಾ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ಒದಗಿಸಿ ಎಂದು ಸಚಿವರಿಗೆ ಮನವಿ ಸಲ್ಲಿಸಿದರು.
ಯಲಬುರ್ಗಾ ಶಾಸಕ ಹಾಲಪ್ಪ ಆಚಾರ ಮಾತನಾಡಿ, ಪದವಿ ಕಾಲೇಜುಗಳು ಆರಂಭವಾಗಿದ್ದು, ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಬಳಸಲಾಗಿದ್ದ ಕಾಲೇಜುಗಳನ್ನು ಪೂರ್ಣ ಸ್ವಚ್ಛಗೊಳಿಸಿ, ಮೂಲ ರೂಪದಲ್ಲಿ ಹಿಂದಿರುಗಿಸುವAತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು. ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಯಲಬುರ್ಗಾ ಕ್ಷೇತ್ರದಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಏಜೆನ್ಸಿಗಳು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ಈ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲು ಅವರು ಸಚಿವರಿಗೆ ಮನವಿ ಮಾಡಿದರು.
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಜಿಲ್ಲೆಯ ಬಹುತೇಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರಾಚಾರ್ಯರ ಹುದ್ದೆ ಭರ್ತಿಯಾಗಿಲ್ಲ. ಸದ್ಯ ಕಾಲೇಜುಗಳು ಆರಂಭವಾಗಿದ್ದು, ಖಾಯಂ ಹುದ್ದೆ ಭರ್ತಿಯಾಗದಿರುವುದರಿಂದ ಪ್ರಭಾರಿ ಅಧಿಕಾರಿಗಳು ಆಡಳಿತ ನಡೆಸುತ್ತಿದ್ದು, ಖಾಯಂ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಗಂಗಾವತಿ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ತಮ್ಮ ದೈನಂದಿನ ಕೆಲಸಗಳಿಗೆ ಜಮೀನುಗಳಿಗೆ ತೆರಳಲು ಹೆದರುವಂತಾಗಿದೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಬೋನು ಒದಗಿಸಿ ಆದಷ್ಟು ಬೇಗ ಚಿರತೆಯನ್ನು ಹಿಡಿದು ಗ್ರಾಮಗಳ ಜನ, ಜಾನುವಾರುಗಳ ಪ್ರಾಣ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ಅರಣ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿ, ವಿವಿಧ ಇಲಾಖೆಗಳ ಯೋಜನೆಗಳಲ್ಲಿ ನೀಡಲಾಗುವ ಸಾಲ ಸೌಲಭ್ಯವನ್ನು ಬ್ಯಾಂಕುಗಳ ಮೂಲಕ ಪಡೆಯಲು ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ಅವರಿಗೆ ಸೂಕ್ತ ಮಾರ್ಗದರ್ಶನ, ದಾಖಲೆಗಳ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಶಾಸಕರಿಂದ ಪತ್ರ ತರುವಂತೆ ಫಲಾನುಭವಿಗಳನ್ನು ಒತ್ತಾಯಿಸುವುದರಿಂದ ಫಲಾನುಭವಿಗಳು ಶಾಸಕರ ಕಚೇರಿಯನ್ನು ಕಾಯುವಂತಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಚಿವರಿಗೆ ಮನವಿ ಮಾಡಿದರು.
ಕನಕಗಿರಿ ಶಾಸಕರಾದ ಬಸವರಾಜ ದಢೇಸೂಗೂರು ಮಾತನಾಡಿ, ತಮ್ಮ ಕ್ಷೇತ್ರದ ಕುಂದು ಕೊರತೆಗಳನ್ನು ಬಗ್ಗೆ ಚರ್ಚಿಸಿದರು.
ಜಿಲ್ಲೆಯಲ್ಲಿ ಹೊಸದಾಗಿ ರಚಿಸಿದ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ, ತಾಲ್ಲೂಕು ಮಟ್ಟದ ಅಧಿಕಾರಿಗಳ ನೇಮಕ, ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭ ಅಪಘಾತ ವಲಯವಾಗಿರುವ ಹುಲಿಗಿ ಜಂಕ್ಷನ್, ಟೋಲ್‌ಗೇಟ್‌ಗಳ ವಿಷಯವಾಗಿ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಜಿ.ಪಂ. ಉಪಾಧ್ಯಕ್ಷರಾದ ಬೀನಾ ಗೌಸ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಸಿಇಒ ರಘುನಂದನ್ ಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿ.ಪಂ. ಉಪ ಕಾರ್ಯದರ್ಶಿ ಶರಣಬಸವರಾಜ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರು, ಜಿ.ಪಂ.ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error