ಬಿಜೆಪಿ ಮುಖಂಡ ದೇವಪ್ಪ ಕಾಮದೊಡ್ಡಿ ಹೃದಯಾಘಾತದಿಂದ ನಿಧನ

ಕೊಪ್ಪಳ: ಬಿಜೆಪಿ ಮುಖಂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕೊಪ್ಪಳದ ಗಂಗಾವತಿಯ ಬಿಜೆಪಿ ಮುಖಂಡ ದೇವಪ್ಪ‌ ಕಾಮದೊಡ್ಡಿ ನಿಧನ. ಹೃದಯಾಘಾತಕ್ಕೆ ಒಳಗಾಗಿದ್ದ ಕಾಮದೊಡ್ಡಿಯವರು ಗಂಗಾವತಿ ಯ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು. ಪರಿಸ್ಥಿತಿ ವಿಷಮಿಸಿದ್ದರಿಂದ ಹುಬ್ಬಳ್ಳಿ ಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಂಗಾವತಿಯ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಕಾಮದೊಡ್ಡಿ ನಗರಸಭೆಯ ನಗರ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರೂ ಆಗಿದ್ದರು.

Please follow and like us:
error