ಬ್ಲಾಕ್ ಮೇಲ್ ಮಾಡಿದವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವ ಧೈರ್ಯ ಸಿಎಂಗಿದೆಯೆ ? ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಶಾಸಕರ CD ಆರೋಪ :

ಬೆಂಗಳೂರು : ಸಿ.ಡಿ ತೋರಿಸಿ @BSYBJP ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ ಈ ಕುರಿತು ಟ್ವೀಟ್ ಮಾಡಿರುವ ಅವರು

ಮುಖ್ಯಮಂತ್ರಿ @BSYBJP ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ.
.@BSYBJP ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಹೇಳಿದ್ದಾರೆ.

Please follow and like us:
error