ಭಾನುವಾರ ಲಾಕ್‌ಡೌನ್: ದೇವಾಲಯಗಳಲ್ಲಿ ಭಕ್ತಾದಿಗಳ ದರ್ಶನಕ್ಕೆ ನಿಷೇಧ   : ಎಸಿ ಲೋಕೇಶ


ಬಳ್ಳಾರಿ,: ಜು.5ರಿಂದ ಆ.8ರವರೆಗೆ ಜಾರಿಗೆ ಬರುವಂತೆ ಎಲ್ಲ 4 ಭಾನುವಾರಗಳಂದು ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ಭಾನುವಾರಗಳಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಭಕ್ತಾದಿಗಳ ದರ್ಶನ ವ್ಯವಸ್ಥೆ ಕಲ್ಪಿಸುವುದನ್ನು ನಿಷೇಧಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪಿ.ಎನ್.ಲೋಕೇಶ ಅವರು ತಿಳಿಸಿದ್ದಾರೆ.
ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಾರ್ಗಸೂಚಿಗಳ ಅನುಸಾರ ದೇವಾಲಯಗಳಲ್ಲಿ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
-*

Please follow and like us:
error