fbpx

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಆಗ್ರಹಿಸಿ ಕಾಂಗ್ರೆಸ್ ಜನಧ್ವನಿ ಪ್ರತಿಭಟನೆ

Koppal  ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣೆ ಕಾಯ್ದೆಗೆ ರೈತ ವಿರೋಧಿ ತಿದ್ದುಪಡಿಸಿ ಮಾಡಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಮಂತ್ರಿ ಶಿವರಾಜ ತಂಗಡಗಿ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಧರಣಿ ನಡೆಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನದ ಹಿನ್ನೆಲೆ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳಶಾಯಿಗಳ ಪರ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿರೋದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.ಬೆಳಗ್ಗೆ 11ಗಂಟೆಯಿಂದ ಮಧ್ಹಾಹ್ನದ ವರೆಗೆ ಧರಣಿ ನಡೆಸಿ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿದರು.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳಶಾಯಿಗಳ ಪರ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿರೋದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮಾಜಿ ಮಂತ್ರಿ ಶಿವರಾಜ ತಂಗಡಗಿ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರಣಬಸವ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ನಾಯಕ, ಕಾಟನ್ ಪಾಷಾ , ಮಾನ್ವಿ ಪಾಷಾ, ಪ್ರಸನ್ನ ಗಡಾದ, ಕೃಷ್ಣ ಇಟ್ಟಂಗಿ, ನವೋದಯ ವಿರೂಪಾಕ್ಷಪ್ಪ, ನಾಗರಾಜ ಚಳ್ಳೊಳ್ಳಿ, ಅಕ್ಬರ್ ಪಾಷ ಸೇರಿ ಇತರರು ಇದ್ದರು.

Please follow and like us:
error
error: Content is protected !!