ವಿಧಾನ ಪರಿಷತ್ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ
ಕೊಪ್ಪಳ : ಅ.28 ರಂದು ನಡೆಯಲಿರುವ ವಿಧಾನ ಪರಿಷತ್ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಅಂಗವಾಗಿ ಮತದಾನ ಕೇಂದ್ರಗಳ ಸುತ್ತಲೂ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಅ.27 ರ ಬೆಳಿಗ್ಗೆ 06 ಗಂಟೆಯಿAದ ಅ.28 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯ ಎಲ್ಲ ಮತದಾನ ಕೇಂದ್ರಗಳ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಸಿಆರ್ಪಿಸಿ ಕಾಯ್ದೆ ಕಲಂ 144 ರಡಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂಬAಧವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಅಬಕಾರಿ ನಿರೀಕ್ಷಕರು, ಅಬಕಾರಿ ಉಪನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷö್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
