ಮನ್ವಂತರ ಕಾರ್ಯಕ್ರದ ವಿಮರ್ಶೆ ಸಲ್ಲಿಸಲು ಅವಧಿ ವಿಸ್ತರಣೆ


ಕೊಪ್ಪಳ, ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಓದುವ ಹವ್ಯಾಸವನ್ನು ಪ್ರೇರೇಪಿಸುವ ಉದ್ದೇಶದಿಂದ ಆಗಸ್ಟ್ 03 ರಂದು ಮನ್ವಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಈಗಾಗಲೇ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಪುಸ್ತಕವನ್ನು ಓದಿ ವಿಮರ್ಶೆ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನವಾಗಿತ್ತು. ಆದರೆ ನೋಂದಣಿಯಾಗಿರುವ ಅನೇಕರು ವಿಮರ್ಶೆಯನ್ನು ಸಲ್ಲಿಸಲು ದಿನಾಂಕವನ್ನು ವಿಸ್ತರಿಸುವಂತೆ ಮನವಿ ಮಾಡಿರುವುದರಿಂದ ಮನ್ವಂತರ ಕಾರ್ಯಕ್ರಮದಲ್ಲಿ ವಿಮರ್ಶೆಯನ್ನು ಸಲ್ಲಿಸಲು ಆಗಸ್ಟ್ 31 ರವರೆಗೂ ಅವಧಿ ವಿಸ್ತರಣೆ ಮಾಡಲಾಗಿದೆ. ವಿಮರ್ಶೆಯನ್ನು ಪಿ.ಡಿ.ಎಫ್ ಮಾದರಿಯಲ್ಲಿ ಮೊ.ಸಂ. 8792011835 ಗೆ ವಾಟ್ಸಪ್ ಮೂಲಕ ಕಳುಹಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

Please follow and like us:
error