ಮಳೆ ಅವಾಂತರ; ಹಳ್ಳದಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್, ಕುಸಿದು ಬಿದ್ದ ಗೋಡೆ

ಕೊಪ್ಪಳ: ಬುಧವಾರ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನಾನಾ ಕಡೆ ಅವಘಡಗಳು ಸಂಭವಿಸಿದ ವರದಿಗಳು ಗೋಚರಿಸಿವೆ.

ಮಳೆ ಆರ್ಭಟಕ್ಕೆ ತತ್ತರಿಸಿರೋ ಜನ ತತ್ತರಿಸಿದ್ದು, ಕೊಪ್ಪಳ ತಾಲೂಕಿನ ಭೈರಾಪುರ ಹಳ್ಳ ತುಂಬಿ ಹರಿಯುತ್ತಿದ್ದು, ನಿಲೋಗಿಪುರದ ರೈತರೊಬ್ಬರ ಟ್ರ್ಯಾಕ್ಟರ್ ಹಳ್ಳದಲ್ಲಿ ಕೊಚ್ಚಿ ಹೋಗಿದೆ. ಟ್ರ್ಯಾಕ್ಟರ್‌ನ್ನು ಜೆಸಿಬಿ ಮೂಲಕ ಮೇಲೆತ್ತಲು ರೈತರು ಜೀವದ ಹಂಗು ತೊರೆದು ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಟ್ರ್ಯಾಕ್ಟರ್‌ನ್ನು ಮೇಲೆತ್ತಲಾಗಿದೆ.
ಬೈರಾಪುರ ಹಳ್ಳ ತಯಂಬಿ ಹರಿಯುತ್ತಿರುವುದರಿಂದ ಕೊಪ್ಪಳ ತಾಲೂಕು ಬೊಚನಹಳ್ಳಿ- ನಿಲೋಗಿಪುರ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇದರಿಂದಾಗಿ ರೈತರು ತಮ್ಮ ಹೊಲಗಳಿಗೆ ತೆರಳಲು ಪರದಾಡುತ್ತಿದ್ದಾರೆ.

ಮನೆ ಗೋಡೆ ಕುಸಿತ
ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ
ಮನೆ ಗೋಡೆ ಕುಸಿದು ಇಡೀ ಕುಟುಂಬ ಪ್ರಾಣಾಪಾಯದಿಂದ ಪಾರಾದ‌ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಹಪುರದಲ್ಲಿ ನಡೆದಿದೆ.
ಶಹಪುರದ ಕಳಕೇಶ್ ಚೌಡ್ಕಿ ಎಂಬುವವರ ಮನೆ ಗೋಡೆ ಕುಸಿದಿದ್ದು, ರಾತ್ರಿ ಗಾಢನಿದ್ರೆಯಲ್ಲಿದ್ದ ಕುಟುಂಬ ಗೋಡೆ ಕುಸಿವ ಸದ್ದು ಕೇಳಿ ಎಚ್ಚೆತ್ತುಕೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮನೆಯ ಪರಿಕರ‌ ಮುಗುಚಿದ್ದನ್ನ ಬಿಟ್ಟರೆ ಅದೃಷ್ಟವಶಾತ್ ಜೀವಹಾನಿ ಇಲ್ಲ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುವಂತೆ ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.

Please follow and like us:
error