ಮಳೆ ಹಾನಿ ಸರ್ವೆ ಮಾಡಿ,ವರದಿ ನೀಡಿ,ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದಿನ‌ ರೀತಿಯೇ ಪರಿಹಾರ ನೀಡಬೇಕು ಅಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌ ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಹಾಗು ಈಗಾಗಲೇ ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ-ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿರುವುದರಿಂದ ಹಳ್ಳಿಗಳಲ್ಲಿರುವ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳನ್ನಾಗಿಸಿ, ಅಲ್ಲಿ‌ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ‌ ನೀಡಿದ್ದಾರೆ. ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸರ್ವೆ‌ ಮಾಡಿ ವರದಿ ಕೊಡಬೇಕು, ಪ್ರತಿದಿನ‌ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕು ಅಂತ ಮಾನ್ಯ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Please follow and like us:
error