ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ : ಕೊಲೆ ಶಂಕೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಹೊರವಲಯದ ಕಾಡು ಪ್ರದೇಶದಲ್ಲಿ ಅಪರಿಚಿತ ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದನ ಕಾಯುವವರು ಶನಿವಾರ ಸಂಜೆ ಜಾನುವಾರು ಮೇಯಿಸಲು ಅಲ್ಲಿಗೆ ಹೋದಾಗ ದುರ್ವಾಸನೆ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಶೋಧ ಕಾರ್ಯಾಚರಣೆಗೆ ಇಳಿದಾಗ ಮಹಿಳೆಯ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲಿ ಮದ್ಯ, ನೀರಿನ ಪೌಚ್‌ಗಳಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಕುರಿತು ಕುಷ್ಟಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Please follow and like us:
error