ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಕನ್ನಡನೆಟ್ ಬೆಂಗಳೂರು : ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಲಾಗಿತ್ತು . ಮಂಗಳವಾರ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ . ಪರಾರಿಯಾಗಿದ್ದು ಹೇಗೆ,‌ಸಹಾಯ ಮಾಡಿದವರ್ಯಾರು ಎನ್ನುವ ಕುರಿತು ತೀವ್ರ ವಿಚಾರಣೆ ನಡೆಸಲಾಗುತ್ತಿದೆ

Please follow and like us:
error