ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ : ರಾಜ್ಯಾದ್ಯಂತ ೭ ದಿನ ಶೋಕಾಚರಣೆ

ಬೆಂಗಳೂರು : ಮಾಜಿ ರಾಷ್ಟ್ರಪತಿಗಳಾದ ಭಾರತ ರತ್ನ ಪ್ರಣಬ್ ಮುಖರ್ಜಿರವರು 31.08.2020 ರಂದು ನವದಹಲಿಯಲ್ಲಿ ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಪ್ರಕಟಿಸಿದೆ . ದಿವಂಗತರ ಗೌರವಾರ್ಥ ದಿ: 31.08.2020 ರಿಂದ 06.09.2020 ರವರೆಗೆ , ಈ ಎರಡೂ ದಿನಗಳು ಸೇರಿದಂತೆ , ಏಳು ದಿನಗಳ ಕಾಲ ರಾಜ್ಯದಾದ್ಯಂತ ಶೋಕವನ್ನು ಆಚರಿಸಲಾಗುವುದು . ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ , ನಿಯತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರಕಾರದ ಆಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ಅಧಿಸೂಚನೆ ಹೊರಡಿಸಿದ್ದಾರೆ.

Please follow and like us:
error