Breaking News
Home / ಕರ್ನಾಟಕ / ಮುಖ್ಯಮಂತ್ರಿಯಾಗಿ ಮುಂದಿನ ವರ್ಷವೂ ದಸರಾ ಪೂಜೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ  
ಮುಖ್ಯಮಂತ್ರಿಯಾಗಿ ಮುಂದಿನ ವರ್ಷವೂ ದಸರಾ ಪೂಜೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ   

ಮುಖ್ಯಮಂತ್ರಿಯಾಗಿ ಮುಂದಿನ ವರ್ಷವೂ ದಸರಾ ಪೂಜೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ  

ಮೈಸೂರು, ಸೆ.30: “ ನನ್ನ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ. ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ನಾನೇ ಮುಖ್ಯಮಂತ್ರಿಯಾಗಿ ಮುಂದಿನ ವರ್ಷವೂ ದಸರಾ ಪೂಜೆ ನೆರವೇರಿಸುತ್ತೇನೆ” ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೋಟೆ ಆಂಜನೇಯ ದೇವಾಲಯದ ಆವರಣದಲ್ಲಿ ಇಂದು ಮಧ್ಯಾಹ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಕೆರೆಕಟ್ಟೆಗಳು ತುಂಬಿದೆ. ಕುಡಿಯುವ ನೀರಿಗೆ, ಜಾನುವಾರುಗಳ ಮೇವಿಗೆ ಯಾವುದೇ ತೊಂದರೆ ಇಲ್ಲ. ಉತ್ತಮ ಬೆಳೆಯಾಗುವ ನಿರೀಕ್ಷೆ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಳೆಯಾಗಿರುವ ಹಿನ್ನೆಲೆಯಲ್ಲಿ ಜನರು ಹೆಚ್ಚಿನ ಉತ್ಸಾಹದಿಂದ ದಸರಾದಲ್ಲಿ ಜನರು ಭಾಗವಹಿಸಿದ್ದಾರೆ. ಇದು ವಿಶ್ವವಿಖ್ಯಾತ ದಸರಾ ಎಂದು ಸಿಎಂ ಅಭಿಪ್ರಾಯಪಟ್ಟರು.

About admin

Comments are closed.

Scroll To Top