ಮೆಕ್ಕೆಜೋಳ, ಸಜ್ಜೆ ಖರೀದಿ ಕೇಂದ್ರ ಪ್ರಾರಂಭ : ಸೆ. 05 ರಂದು ಜಿಲ್ಲಾ ಟಾಸ್ಕ ಫೋರ್ಸ್ ಸಭೆ

ಕೊಪ್ಪಳ, : 2020-21ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಹಾಗೂ ಸಜ್ಜೆ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಸಲುವಾಗಿ ಜಿಲ್ಲಾ ಟಾಸ್ಕ ಫೋರ್ಸ ಸಮಿತಿ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಸುರಳ್ಕರ್ ವಿಕಾಸ್ ಕಿಶೋರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್. 05 ರಂದು ಮದ್ಯಾಹ್ನ 04 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕರೆಯಲಾಗಿದೆ.

ರೈತರು ಉತ್ತಮ ಫಸಲನ್ನು ಬೆಳೆದಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಹಾಗೂ ಸಜ್ಜೆ ದರಗಳು ಕುಸಿತಗೊಂಡಿರುವ ಹಿನ್ನೆಲೆಯಲ್ಲಿ, ರೈತರ ಹಿತದೃಷ್ಟಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರ ಕೊರಿಕೆ ಮತ್ತು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮೆಕ್ಕೆಜೋಳ ಹಾಗೂ ಸಜ್ಜೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವ ವಿಷಯದ ಕುರಿತು ಚರ್ಚಿಸಲು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಏರ್ಪಡಿಸಲಾಗಿದ್ದು, ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error