ಯಾದಗಿರಿ ಜಿಲ್ಲೆ : 98 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ

ಯಾದಗಿರಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಆ. 29ರ ಶನಿವಾರ 65 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 3503 ಮಂದಿ ಗುಣಮುಖರಾಗಿದ್ದಾರೆ. ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 39 ಜನರು ಮೃತಪಟ್ಟಿದ್ದಾರೆ. ಆಗಸ್ಟ್ 29ರ ಶನಿವಾರ ಹೊಸದಾಗಿ 98 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5205ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1663 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಗಸ್ಟ್ 29ರ ಶನಿವಾರ ವರದಿಯಾದ 98 ಪ್ರಕರಣಗಳಲ್ಲಿ 36 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 46 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನೂಳಿದ 16 ಜನ ಸುರಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದವರು ಎಂದು ಅವರು ತಿಳಿಸಿದ್ದಾರೆ.

Please follow and like us:
error