fbpx

ಯಾದಗಿರಿ 828 ಪಾಜಿಟಿವ್ : 438 ಜನ ಗುಣಮುಖ

ಮಂಗಳವಾರ 65 ಜನ ಗುಣಮುಖ
19940 ವರದಿ ನೆಗೆಟಿವ್, 891 ವರದಿ ಬಾಕಿ

ಯಾದಗಿರಿ: ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಮಂಗಳವಾರ ಪಾಸಿಟಿವ್ ಬಂದ 6 ಮಾದರಿ ಸೇರಿದಂತೆ ಜೂನ್ 16ರವರೆಗೆ ಒಟ್ಟು 828 ವರದಿ ಪಾಸಿಟಿವ್ ಬಂದಿವೆ. ಮಂಗಳವಾರದ 28 ನೆಗೆಟಿವ್ ವರದಿ ಸೇರಿ ಈವರೆಗೆ 19,940 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 648 ಮಾದರಿಗಳು ಸೇರಿದಂತೆ 891 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 828 ವ್ಯಕ್ತಿಗಳ ಪೈಕಿ ಮಂಗಳವಾರ ಮತ್ತೆ 65 ಜನ ಗುಣಮುಖರಾಗಿದ್ದು, ಜೂನ್ 16ರವರೆಗೆ ಒಟ್ಟು 438 ಜನ ಗುಣಮುಖರಾಗಿರುತ್ತಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 389 ಪ್ರಕರಣಗಳು ಸಕ್ರಿಯವಾಗಿರುತ್ತವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,313 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,710 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 46 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 161 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪೂರ ಕೊರೊನಾ ಕೇರ್ ಸೆಂಟರ್‍ನಲ್ಲಿ 50 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್‍ನಲ್ಲಿ 40 ಮತ್ತು ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್‍ನಲ್ಲಿ 65 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‍ಗಳಲ್ಲಿ ಒಟ್ಟು 887 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950ಗೆ ಮಂಗಳವಾರ 6 ಕರೆಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ಮತ್ತು ಬೇರೆ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ನಿಗದಿತ ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ:9449933946 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

Please follow and like us:
error
error: Content is protected !!