ರವಿವಾರ ( ಮೇ 31) ಸಂಪೂರ್ಣ ಲಾಕ್‌ಡೌನ್ ಇಲ್ಲ- ಸಿಎಂ

ಬೆಂಗಳೂರು : ರಾಜ್ಯದಲ್ಲಿ ಈ ರವಿವಾರ ( ಮೇ 31 , 2020 ) ಸಂಪೂರ್ಣ ಲಾಕ್‌ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ . ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ . ಆದ್ದರಿಂದ ರವಿವಾರ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ . ಕೊರೋನ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ . ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ . ಆದರೆ , ರವಿವಾರ ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು . ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರಕಾರ ಈ ಹಿಂದೆ ಆದೇಶ ಹೊರಡಿಸಿತ್ತು . ಅದರಂತೆ ಕಳೆದ ರವಿವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿತ್ತು .

Please follow and like us:
error