ರಾಜ್ಯಾದ್ಯಂತ ಇಂದು SSLC ಪರೀಕ್ಷೆ : ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು

ಬೆಂಗಳೂರು : ರಾಜ್ಯಾದ್ಯಂತ ಇಂದು SSLC ಪರೀಕ್ಷೆ ಆರಂಭವಾಗಿದ್ದು ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು ಧಾವಿಸುತ್ತಿದ್ದಾರೆ. ಕರೋನಾದ ಭಯ ಮತ್ತು ಆತಂಕದೊಡನೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಆದರೆ ಸರಕಾರ ಮತ್ತು ಶಿಕ್ಷಣ ಇಲಾಖೆ ಅವರ ಆತಂಕ ದೂರ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಯ ಥರ್ಮಲ್ ಟೆಸ್ಟಿಂಗ್ ಮಾಡಲಾಗುತ್ತಿದೆ. ಆದರೂ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಆತಂಕ ದೂರವಾಗಿಲ್ಲ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಪೋಲಿಸರುಲನ್ನು ಸಹ ನಿಯೋಜಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಇದೆ.

Please follow and like us:
error