fbpx

ರಾಣೇಬೆನ್ನೂರು ಸಂಪೂರ್ಣ ಬಂದ್ ಕುರಿತು ಜಿಲ್ಲಾಡಳಿತ ಯಾವುದೇ ಆದೇಶ ಹೊರಡಿಸಿಲ್ಲ


-ಜಿಲ್ಲಾ ದಂಡಾಧಿಕಾರಿ ಕೃಷ್ಣ ಬಾಜಪೇಯಿ
ಹಾವೇರಿ: : ಹಾವೇರಿ ಜಿಲ್ಲೆ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರ ವ್ಯಪ್ತಿಯಲ್ಲಿ ಜುಲೈ 14 ರಿಂದ 20ರವರೆಗೆ ಅವಶ್ಯಕ ಸೇವೆಗಳು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಿಲ್ಲಾಡಳಿತದಿಂದ ಈ ರೀತಿಯ ಯಾವುದೇ ಆದೇಶ ಹೊರಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜೂನ್ 30 ರಂದು ಹೊರಡಿಸಿರುವ ಅದೇಶದಂತೆ ದಿನಾಂಕ 31-07-2020ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಉಳಿದಂತೆ ರಾಣೇಬೆನ್ನೂರಿನಲ್ಲಿ ಸಂಪೂರ್ಣ ಬಂದ್ ಮಾಡುವ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error
error: Content is protected !!