ರಾಯಚೂರು : ಇಂದು ೨೩ ಪಾಸಿಟಿವ್ ಪ್ರಕರಣ ದೃಢರಾಯಚೂರು,: ಜಿಲ್ಲೆಯಲ್ಲಿ ಜು.೭ರ ಮಂಗಳವಾರ ಹೊಸದಾಗಿ ೨೩ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ೫೯೮ ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದಂತಾಗಿದ್ದು, ಅವರಲ್ಲಿ ಚಿಕಿತ್ಸೆ ಪಡೆದು ೪೩೮ ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನಿಂದ ೧೦೦, ಲಿಂಗಸೂಗೂರು ತಾಲೂಕಿನಿಂದ ೮೬, ಮಾನ್ವಿ ತಾಲೂಕಿನಿಂದ ೧೧೪, ಸಿಂಧನೂರು ತಾಲೂಕಿನಿಂದ ೧೦೪ ಮತ್ತು ರಾಯಚೂರು ತಾಲೂಕಿನಿಂದ ೮೯ ಸೇರಿದಂತೆ ಒಟ್ಟು ೪೯೩ ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-೧೯ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಜು.೭ರ ಮಂಗಳವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-೧೯ ಪರೀಕ್ಷೆಗಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಇಂದು ಬಂದ ವರದಿಗಳಲ್ಲಿ ೩೧೨ ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ ೨೫,೯೯೧ ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ ೨೩,೩೪೬ ವರದಿಗಳು ನೆಗೆಟಿವ್ ಆಗಿವೆ. ಉಳಿದ ೨,೦೪೧ ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್‌ಗಳಲ್ಲಿಂದು ೮೦೬ ಜನರನ್ನು ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಲಾಗಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೭೮, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೧೪, ಮಾನವಿ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೨೨ ಹಾಗೂ ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೨೧ ಜನರು ಸೇರಿದಂತೆ ಒಟ್ಟು ೧೩೫ ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:
error