ರಾಯಚೂರು ಜಿಲ್ಲೆಯಲ್ಲಿಂದು ೧೨೫ ಕೋವಿಡ್-೧೯ ದೃಢ, ೨ ಸಾವು

ರಾಯಚೂರು,)- ಜಿಲ್ಲೆಯಲ್ಲಿ ಆ.೨೬ರ ಬುಧವಾರ ಕೋವಿಡ್-೧೯ನ ೧೨೫ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದೂವರೆಗೆ ೬,೨೬೦ ಮಂದಿಗೆ ಕೊರೋನಾ ಸೋಂಕು ವರದಿಯಾಗಿದೆ. ಅವರಲ್ಲಿ ಇಂದು ೯೨ ಜನರು ಸೇರಿದಂತೆ ಇದೂವರೆಗೆ ಒಟ್ಟಾರೆ ೪,೯೧೭ ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಹಾಗೂ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನಿಂದ ೧೭೭, ಲಿಂಗಸೂಗೂರು ತಾಲೂಕಿನಿಂದ ೧೪೭, ಮಾನ್ವಿ ತಾಲೂಕಿನಿಂದ ೧೫೬, ಸಿಂಧನೂರು ತಾಲೂಕಿನಿಂದ ೧೬೪ ಮತ್ತು ರಾಯಚೂರು ತಾಲೂಕಿನಿಂದ ೨೧೧ ಸೇರಿದಂತೆ ಒಟ್ಟು ೮೫೫ ಜನರ ಮಾದರಿಯನ್ನು ಕೋವಿಡ್-೧೯ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-೧೯ ಪರೀಕ್ಷೆಗಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಇಂದು ಬಂದ ವರದಿಗಳಲ್ಲಿ ೨,೦೨೧ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ ೬೯,೦೫೬ ಜನರ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ ೫೯,೪೪೫ ವರದಿಗಳು ನೆಗೆಟಿವ್ ಆಗಿವೆ. ಉಳಿದ ೨,೪೯೬ ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್‌ಗಳಲ್ಲಿಂದು ೧,೨೦೫ ಜನರನ್ನು ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಲಾಗಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೮೨, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೬೨, ಮಾನವಿ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೦ ಹಾಗೂ ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೭೯ ಮತ್ತು ದೇವದುರ್ಗ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೦ ಜನರು ಸೇರಿದಂತೆ ಒಟ್ಟು ೩೭೬ ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Please follow and like us:
error