ಲಾಕ್‌ಡೌನ್ ಪ್ರಯುಕ್ತ ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ: ಲಕ್ಷ್ಮಣ ಸವದಿ


ಬೆಂಗಳೂರಿನಲ್ಲಿ ಲಾಕ್‌ಡೌನ್ ವಿಧಿಸಲಾಗುತ್ತಿರುವುದರಿಂದ ಬೆಂಗಳೂರಿನಿಂದ ಇತರ ಕಡೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು

ಕಾರ್ಯಾಚರಣೆ ಗೊಳಿಸಲಾಗಿರುತ್ತದೆ‌. ಒಟ್ಟು 11466 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಸಕಲ ವ್ಯವಸ್ಥೆಯನ್ನು ಸೂಕ್ತವಾಗಿ ಕೈಗೊಳ್ಳಲಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ

ಪ್ರಯಾಣಿಕರ ಹಿತದೃಷ್ಟಿಯಿಂದ ಇತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಲಾಕ್ಡೌನ್ ಘೋಷಣೆಯಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ನಮ್ಮ ಸರಕಾರ ಸಾರ್ವಜನಿಕರ ಹಿತರಕ್ಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ಸೂಕ್ತ ಸಹಕಾರ ನೀಡಬೇಕೆಂದು

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ

Please follow and like us:
error