ಲಾರಿ, ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ.

Bellary ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಕಾನಾಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿಯ ರಾ.ಹೆ.50 ರಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಭೀಮರಾಯ (38) ಅಂಜಲಿ ದೇವಿ(14) ಮತ್ತು ಕಾರು ಚಾಲಕ ದೇವರಾಜ್ ( 21) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ, ಕಾನಾಹೊಸಳ್ಳಿ ಬಸ್ ನಿಲ್ದಾಣದ ಬಳಿ ಇರೋ ರಾ. ಹೆ.50 ರ ಫ್ಲೈ ಓವರ್ ಮೇಲೆ ನೀರು ನಿಂತಿತ್ತು, ನೀರು ನಿಂತ ಪರಿಣಾಮ ಕಾರು ನಿಯಂತ್ರಣ ತಪ್ಪಿ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದೆ‌. ಈ ಕಾರಣಕ್ಕೆ ಈ ಅವಘಢ ನಡೆದಿದೆ‌. ಕೂಡ್ಲಿಗಿ ಡಿವೈಎಸ್ಪಿ, ಕೊಟ್ಟೂರು ಸಿಪಿಐ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
error