ಲೋಕಸಭೆ ಚುನಾವಣೆ : ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್. 8 ಕೊನೆಯ ದಿನ

ಕೊಪ್ಪಳ ಏ. : ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್. 8 ರಂದು ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಏಪ್ರಿಲ್. 5ರಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಒಂದು ನಾಮಪತ್ರ ತಿರಸ್ಕøತಗೊಂಡು 16 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದವು. ಮತದಾನವು ಏಪ್ರಿಲ್. 23ರ ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಡೆಯಲಿದೆ.