ವೆಂಟಿಲೇಟರ್ ಮತ್ತು ಆಕ್ಸಿಜನ್ ಸಮಸ್ಯೆ ಇಲ್ಲ- DC ವಿಕಾಸ ಕಿಶೋರ್ ಸುರಳ್ಕರ್

Koppal ಕೋವಿಡ್-19 ಕೇಸ್‌ಗಳು ಹೆಚ್ಚುತ್ತಿದ್ದು, ಹೆಚ್ಚೆಚ್ಚು ಪರೀಕ್ಷೆಗಳನ್ನು ಮಾಡುವ ಗುರಿಯನ್ನಿಟ್ಟುಕೊಂಡು ಕೋವಿಡ್ ಗುಣಲಕ್ಷಣಗಳು ಕಂಡುಬAದ ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಅರಿವನ್ನು ಮೂಡಿಸಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಈಗ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಿ ಚಿಕಿತ್ಸೆ ನೀಡಲು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹೇಳಿದರು.

ಇದನ್ನು ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಯ ಕೊರತೆ ಇದ್ದು, ಸಿಬ್ಬಂದಿ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಾಗಿ ಪಾಸಿಟಿವ್ ಪ್ರಕರಣಗಳು ಗಂಗಾವತಿ, ಕೊಪ್ಪಳ ನಗರ, ಕಾರಟಗಿ ಮತ್ತು ಮುನಿರಾಬಾದ್ ಈ ಭಾಗಗಳಲ್ಲಿ ಕಂಡು ಬಂದಿದ್ದು ಸಾರ್ವಜನಿಕರು ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಈ ರೋಗವನ್ನು ಇತರರಿಗೆ ಹರಡದಂತೆ ಮುಂಜಾಗ್ರತೆ ವಹಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
 ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿದ್ರಾಮೇಶ್ವರ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ, ಯುನಿಸೆಫ್‌ನ ಜಿಲ್ಲಾ ಸಂಯೋಜಕರಾದ ಹರೀಶ್ ಜೋಗಿ ಉಪಸ್ಥಿತರಿದ್ದರು.

Please follow and like us:
error