fbpx

ಶಾಲೆಗಳ ಪ್ರಾರಂಭ ಬಗ್ಗೆ ಯಾವುದೇ ಉಹಾಪೋಹ, ವದಂತಿಗಳಿಗೆ ಕಿವಿಗೊಡಬೇಡಿ- ಸಿಎಂ ಬಿಎಸ್ವೈ ಮನವಿ

ಬೆಂಗಳೂರು : ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ  ಯಾವುದೇ ಉಹಾಪೋಹ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಿಎಂ ಬಿ.ಎಸ್ .ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು

ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ . ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ . ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ಸಹಿತ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ . ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು , ತಜ್ಞರು , ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಭಾದಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು . ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆಂದು ಪೋಷಕರಿಗೆ ಮನವಿ ಮಾಡುತ್ತೇನೆ ಮತ್ತು ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ

Please follow and like us:
error
error: Content is protected !!