ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶ್ರೀನಿವಾಸ್ ಪ್ರಸಾದ್

ಬೆಂಗಳೂರು, ಅ.17: ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತನ್ನ ಶಾಸಕ ಸ್ಥಾನಕ್ಕೆ ಇಂದು ಮಧ್ಯಾಹ್ನ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ವಿಧಾನಸಭಾ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.

srinivas_prasad_Resigns

ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅವರು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂಬ ಅಸಮಾಧಾನ ಹೊಂದಿದ್ದರು. ಈ ಸಂದರ್ಭ ಮಾತನಾಡಿದ ಅವರು, ನನ್ನಲ್ಲಿ ಸಾಕಷ್ಟು ನೋವಿದೆ. ಅದನ್ನೆಲ್ಲ ಹೇಳಿಕೊಳ್ಳಬೇಕಿದೆ. ಸದ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಲಿದ್ದೇನೆ. ಬಳಿಕ ತಾನು ಸ್ವತಂತ್ರ. ಆನಂತರ ಮಾಧ್ಯಮದೆದುರು ನನ್ನ ನೋವು ಬಿಚ್ಚಿಡಲಿದ್ದೇನೆ ಎಂದು ಹೇಳಿದರು.

Related posts

Leave a Comment