ಶಿರಾ ವಿಧಾನಸಭೆ ಉಪ – ಚುನಾವಣೆ ವೀಕ್ಷಕರಾಗಿ ಶಿವರಾಜ್ ತಂಗಡಗಿ ನೇಮಕ

ಬೆಂಗಳೂರು : ಶಿರಾ ವಿಧಾನಸಭೆ ಉಪ – ಚುನಾವಣೆ ವೀಕ್ಷಕರಾಗಿ ಡಿಸಿಸಿ ಅದ್ಯಕ್ಷ ಶಿವರಾಜ್ ತಂಗಡಗಿ ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್

ಪ್ರಸ್ತುತ ತುಮಕೂರು ಜಿಲ್ಲೆಯ ಶಿರಾ ವಿಧಾನಸಭೆ ಕ್ಷೇತ್ರಕ್ಕೆ ಉಪ – ಚುನಾವಣೆ ನಡೆಯುತ್ತಿದ್ದು , ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ನಮ್ಮ ಪಕ್ಷವನ್ನು ಇನ್ನಷ್ಟು ಬಲವರ್ಧನೆಗೊಳಿಸುವುದು ಪ್ರತಿಯೊಬ್ಬ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಕರ್ತವ್ಯವೆಂದು ನಾನು ಭಾವಿಸುತ್ತೇನೆ . ಈ ಚುನಾವಣೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ” ಶಿರಾ ವಿಧಾನಸಭೆ ಉಪ – ಚುನಾವಣೆ ಪ್ರಚಾರ ಸಮಿತಿ ” ಯನ್ನು ರಚಿಸಿ , ಮಾನ್ಯ ಮಾಜಿ ಉಪಮುಖ್ಯಮಂತ್ರಿಗಳಾದ ಡಾ : ಜಿ . ಪರಮೇಶ್ವರ ರವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಹಾಗೂ ಕೆ.ಎನ್ . ರಾಜಣ್ಯ ಅವರನ್ನು ಸಹ – ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ . ಈ ಉಪ – ಚುನಾವಣೆಯಲ್ಲಿ ಕಾರ್ಯನಿರ್ವಹಿಸಲು ತಮ್ಮನ್ನು “ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ . ತಾವು ತಕ್ಷಣ ಡಾ : ಜಿ . ಪರಮೇಶ್ವರ್ ಅವರನ್ನು ಸಂಪರ್ಕಿಸಿ ಅವರ ಮಾರ್ಗದರ್ಶನಗೊಂದಿಗೆ ಕ್ಷೇತ್ರದಲ್ಲಿ ಲಭ್ಯವಿರುವ ಸ್ಥಳೀಯ ಮುಖಂಡರು ಹಾಗೂ ಕಾಂಗ್ರೆಸ್ ಕಚೇರಿ / ಕ್ಯಾಂಪ್ ಕಚೇರಿಗಳ ಸಹಕಾರದೊಂದಿಗೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಾಗಿ ಕೋರುತ್ತೇನೆ . ಈ ಉಪ – ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವಿಗಾಗಿ ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ , ಆ ಬೂತ್ ಅಥವಾ ಹಳ್ಳಿಯಲ್ಲಿ ಇರುವ 2-3 ದಶಕಗಳ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕುಟುಂಬಗಳ ಸಂಪರ್ಕ ಮಾಡಿ , ಅವರ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲು ಅವರನ್ನು ಮನವೊಲಿಸಬೇಕು ಹಾಗೆಯೇ ಯುವಕರ ಹಾಗೂ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡ ಯುವಕರನ್ನೊಳಗೊಂಡ ಯುವಕರ ಪ್ರತ್ಯೇಕ ಸಭೆಗಳನ್ನು ನಡೆಸಿ ಅವರುಗಳಲ್ಲಿ ನಮ್ಮ ಪಕ್ಷದ ಬಗ್ಗೆ ಭರವಸೆ ಮೂಡಿಸಿ ಆಸಕ್ತರಾಗಿ ಪಕ್ಷದಲ್ಲಿ ಸ್ವಯಂಪ್ರೇರಣೆಯಿಂದ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡುವಂತೆ ಮನವೊಲಿಸಬೇಕು . ಈ ನಿಟ್ಟಿನಲ್ಲಿ ತಾವುಗಳು ಕೂಡಲೇ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಬೇಕೆಂದು Kpcc ಅದ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

Please follow and like us:
error