ಶೀಘ್ರವೇ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ದ: ರಾಜ್ಯ ಚುನಾವಣಾ ಆಯೋಗ

ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಕೂಡ ಪ್ರತ್ಯೇಕ ಎಸ್.ಓ.ಪಿ.ಯನ್ನು ಸಿದ್ಧಪಡಿಸಿಕೊಂಡಿದ್ದು , ಅದರಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸಲು ಸಿದ್ಧತೆಯನ್ನು ಮಾಡಿಕೊಂಡಿರುತ್ತದೆ . ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಶೀಘ್ರದಲ್ಲೇ ನಡೆಸುವುದು ಅನಿವಾರ್ಯವಾಗಿರುತ್ತದೆ ಎಂದು ಆದೀನ ಕಾರ್ಯದರ್ಶಿ ಹೇಳಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು

ಕೋವಿಡ್ ಮಹಾಮಾರಿ ಹರಡುವಿಕೆಯಲ್ಲಿ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಮುಂದೂಡುವ ಬಗ್ಗೆ ಸೂಕ್ತ ತೀರ್ಮಾನವನ್ನು ತಗೆದುಕೊಳ್ಳುವಂತೆ ಕೋರಿರುವ ಪ್ರಸ್ತಾವನೆಯನ್ನು ಆಯೋಗವು ಪರಿಶೀಲಿಸಿದೆ , ಭಾರತ ಸಂವಿಧಾನದ ಪರಿಚ್ಛೇದ 243-3 ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 1993 ರ ಪ್ರಕರಣ 498 ಎಎ ಗಳನ್ವಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅವಧಿಯು ಮುಕ್ತಾಯಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿರುವುದು ರಾಜ್ಯ ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯವಾಗಿರುತ್ತದೆ . ಆದರೆ , ಕೋವಿಡ್ -19 ರ ಹಿನ್ನೆಲೆಯಲ್ಲಿ ಅವಧಿ ಮುಕ್ತಾಯವಾಗುತ್ತಿದ್ದ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಮುಂದೂಡಿ ಅಯೋಗವು ಉಲ್ಲೇಖದ ( 2 ) ರಂತೆ ಆದೇಶವನ್ನು ಹೊರಡಿಸಿತು . ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಮುಂದೂಡಿದ ವಿಚಾರದಲ್ಲಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ : 7987/2020 ( ಜಿಎಂಪಿಐಎಲ್ ) ದಾಖಲಾಗಿದ್ದು , ಮಾನ್ಯ ಉಚ್ಛ ನ್ಯಾಯಾಲಯವು ದಿನಾಂಕ : 17.06.2020 ರ ಮಧ್ಯಂತರ ಆದೇಶದಲ್ಲಿ ಚುನಾವಣೆಯನ್ನು ಮುಂದೂಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆದೇಶಿಸಿದಂತೆ ರಾಜ್ಯ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿರುತ್ತದೆ . ಇದಲ್ಲದೆ , ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ , 1993 ರ ಪ್ರಕರಣ 8 ( 2 ) ರಂಶಿ ಆಡಳಿತಾಧಿಕಾರಿಗಳು ನೇಮಕಗೊಂಡ 6 ತಿಂಗಳ ಒಳಗಾಗಿ ಗ್ರಾಮ ಪಂಚಾಯತಿಗಳಿಗೆ ಚುನಾವಣೆಯನ್ನು ನಡೆಸಬೇಕಾಗಿರುತ್ತದೆ . ಕೊವಿಚ್ -19 ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಚುನಾವಣಾ ಆಯೋಗವು ಎಸ್.ಒ.ಸಿ.ಯನ್ನು ಹೊರಡಿಸಿರುತ್ತದೆ . ಸಾಮಾನ್ಯವಾಗಿ ಆಯೋಗವು ಜಿಲ್ಲಾವಾರು ಎರಡು ಹಂತದಲ್ಲಿ ಚುನಾವಣೆಯನ್ನು ನಡೆಸಲಾಗುತ್ತಿತ್ತು . ಆದರೆ , ಕೊವಿಚ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ತಾಲ್ಲೂಕುಗಳನ್ನು ಪ್ರತ್ಯೇಕಿಸಿ ಎರಡು ಹಂತದಲ್ಲಿ ಚುನಾವಣೆಯನ್ನು ನಡೆಸಲು ಉದ್ದೇಶಿಸಿದೆ , ಅಲ್ಲದೆ , ಚುನಾವಣಾ ಅಧಿಕಾರಿ / ಸಿಬ್ಬಂದಿಗಳ ಚಲನವಲನಗಳನ್ನು ನಿಯಂತ್ರಿಸುವ ಉದ್ದೇಶದಿಂದ ಚುನಾವಣೆಗೆ ಆಯಾ ತಾಲ್ಲೂಕಿನ ಅಧಿಕಾರಿ / ಸಿಬ್ಬಂದಿಗಳನ್ನೇ ಮತಗಟ್ಟೆ ಅಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ .

ಗ್ರಾಮ ಪಂಚಾಯತಿ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿ ಬಹಳ ಚಿಕ್ಕದಿರುವುದರಿಂದ ಅಭ್ಯರ್ಥಿಗಳ ಪ್ರಚಾರವು ಆಯಾ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ . ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಗರಿಷ್ಟ 5 ಜನ ಬೆಂಬಲಿಗರೊಂದಿಗೆ ಮಾತ್ರ ಚುನಾವಣಾ ಪ್ರಚಾರವನ್ನು ಮಾಡುವಂತೆ ಸೂಚನೆಯನ್ನು ನೀಡಲಾಗಿರುತ್ತದೆ . ಇದಲ್ಲದೆ , ಮತದಾರರ ಗುಂಪುಗೂಡುವಿಕೆಯನ್ನು ತಡೆಗಟ್ಟುವ ಹಾಗೂ ಕೋವಿಡ್ ಮುನ್ನೆಚ್ಚರಿಕೆಯನ್ನು ಪರಿಪಾಲಿಸಲು ಅನುವಾಗುವಂತೆ ಪ್ರತಿ ಮತಗಟ್ಟೆಗೆ 1,404 ಮತದಾರರ ಬದಲಿಗೆ ಗರಿಷ್ಟ 1,490 ಮತದಾರರು ಇರುವಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ . ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಈಗಾಗಲೇ ಅಂತಿಮ ಮತದಾರರ ಪಟ್ಟಿಯನ್ನು ಸಹ ದಿನಾಂಕ : 31.08.2020 ರಂದು ಪ್ರಚುರಪಡಿಸಲಾಗಿರುತ್ತದೆ . ಕೋವಿಡ್ ಪ್ರಕರಣಗಳು ಅತ್ಯಧಿಕವಾಗಿ ನಗರ ಪ್ರದೇಶಗಳಲ್ಲಿ ಕಂಡುಬರುತ್ತಿರುವುದರಿಂದ , ಸದ್ಯದಲ್ಲಿಯೇ ಗ್ರಾಮಾಂತರ ಮತದಾರರು ಭಾಗವಹಿಸುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಡೆಸುವುದು ಸೂಕ್ತವಾಗಿರುತ್ಸದೆ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಅವಧಿಯು 202 ರ ಮೇ – ಜೂನ್ ಮಾಗಳಲ್ಲಿ ಮುಕ್ತಾಯಗೊಳ್ಳಲಿದ್ದು , ಅವುಗಳಿಗೂ ಸಹ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಿರುತ್ತದೆ . ಈ ಮಧ್ಯೆ ಸರ್ಕಾರವು 54 ) ಹೊಸ ತಾಲ್ಲೂಕುಗಳನ್ನು ರಚನೆ ಮಾಡಿರುವುದರಿಂದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಕ್ಷೇತ್ರಗಳ ಮುನರ್‌ ವಿಂಗಡಣೆ ಮತ್ತು ಮೀಸಲಾತಿಯನ್ನು ಕಾರ್ಯವನ್ನು 2020 ರ ಡಿಸೆಂಬರ್ ಮಾಹೆಯಿಂದಲೇ ಪ್ರಾರಂಭಿಸಬೇಕಾಗಿರುತ್ತದೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಆಯೋಗವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ . 2021 ರ ಮೇ ಮಾಹೆಯಲ್ಲಿ 5 ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ಪೂರ್ಣಗೊಳ್ಳುತ್ತಿರುವುದರಿಂದ , ಇವುಗಳಿಗೂ ಸಹ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಆಯೋಗವು ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ . 2021 ನೇ ಸಾಲಿನಲ್ಲಿ ರಾಜ್ಯ ಚುನಾವಣಾ ಆಯೋಗವು ಮೇಲೆ ವಿವರಿಸಿರುವ ಎಲ್ಲಾ ಚುನಾವಣೆಗಳನ್ನು ನಡೆಸಬೇಕಿರುವುದರಿಂದ , 2020 ನೇ ಸಾಲಿನಲ್ಲಿಯೇ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯನ್ನು ಮುಕ್ತಾಯಗೊಳಿಸುವುದು ಸೂಕ್ತವಾಗಿರುತ್ತದೆ . ಪ್ರಸ್ತುತ ಭಾರತ ಚುನಾವಣಾ ಆಯೋಗವು ಎಸ್.ಒ.ಪಿ.ಯನ್ನು ಸಿದ್ಧಪಡಿಸಿಕೊಂಡು ಅದರನುಸಾರವಾಗಿ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಹೊರಡಿಸಿದ್ದು , ಅದರಂತೆ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿರುತ್ತದೆ . ಅಲ್ಲದೆ , ಬಿಹಾರ್ ರಾಜ್ಯದ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಹ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿರುತ್ತದೆ , ಇದರಂತೆ , ರಾಜ್ಯ ಚುನಾವಣಾ ಆಯೋಗವು ಕೂಡ ಪ್ರತ್ಯೇಕ ಎಸ್.ಓ.ಪಿ.ಯನ್ನು ಸಿದ್ಧಪಡಿಸಿಕೊಂಡಿದ್ದು , ಅದರಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸಲು ಸಿದ್ಧತೆಯನ್ನು ಮಾಡಿಕೊಂಡಿರುತ್ತದೆ . ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಶೀಘ್ರದಲ್ಲೇ ನಡೆಸುವುದು ಅನಿವಾರ್ಯವಾಗಿರುತ್ತದೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಲು ನಾನು ನಿರ್ದೇಶಿಸಲ್ಪಟ್ಟಿರುತ್ತೇನೆ ಎಂದು ರಾಜ್ಯ ಚುನಾವಣಾ ಆಯೋಗ ಅಧೀನ ಕಾರ್ಯದರ್ಶಿ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

Please follow and like us:
error