fbpx

ಸಂಸದೆ ಸುಮಲತಾ ಅಂಬರೀಷ್ ಗೆ ಕರೋನಾ ಪಾಜಿಟಿವ್

ಮಂಡ್ಯದ ಸಂಸದೆ ಸುಮಲತಾ ಅಂಬರೀಷ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ ಈ ಕುರಿತು ಟ್ವೀಟ್ ಮಾಡಿರುವ ಅವರು

ಆತ್ಮೀಯರೆ , ಶನಿವಾರ , ಜುಲೈ 4 ರಂದು , ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು . ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ , ಕೋವಿಡ್ 19 ಪರೀಕ್ಷೆಗೆ ಒಳಗಾದೆ . ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ . ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ . ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ . ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ . ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ . ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ . ನಿಮ್ಮ ಹಾರೈಕೆ ಇರಲಿ . ಸುಮಲತಾ ಅಂಬರೀಷ್ ಸದಸ್ಯೆ , ಮಂಡ್ಯ ಲೋಕಸಭಾ ಕ್ಷೇತ್ರ ಎಂದು ಟ್ವೀಟ್ ಮಾಡಿದ್ದಾರೆ

Please follow and like us:
error
error: Content is protected !!