ಸಚಿವ ಬಿ.ಸಿ.ಪಾಟೀಲ್ ಗೆ ಕರೋನಾ ಪಾಜಿಟಿವ್

ಕೊಪ್ಪಳ : ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ . ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ , ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ . ಅಲ್ಲದೇ ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು , ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ , ಯಾರೂ ಆತಂಕ ಪಡುವ ಅಗತ್ಯವಿಲ್ಲ , ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ , ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ !ಎಂದು ಟ್ವೀಟ್ ಮಾಡಿದ್ದಾರೆ

Please follow and like us:
error