ಸಚಿವ ಶಿವರಾಮ ಹೆಬ್ಬಾರ ರಾಘವೇಂದ್ರ ಮಠಕ್ಕೆ ಬೇಟಿ

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ರಾಘವೇಂದ್ರ ಮಠಕ್ಕೆ ಬೇಟಿ

ಕೊಪ್ಪಳ: ಕಾರ್ಮಿಕ ಮತ್ತು ಸಕ್ಕರೆ ಕಾರ್ಖಾನೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಕೊಪ್ಪಳದ ಬ್ರಾಹ್ಮಣ ಸಮಾಜದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಈ ಸಂದರ್ಭದಲ್ಲಿ ಕೊಪ್ಪಳ ಬ್ರಾಹ್ಮಣ ಸಮುದಾಯವರ ವತಿವಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತ್ರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಮಿಕ ಇಲಾಖೆಯ ಪ್ರಗತಿಯ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಸಚಿವರು ನೀಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Please follow and like us:
error