ಸಮಾಜದ ಕಟ್ಟಕಡೆಯ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ : ಆರ್. ಪ್ರಮೀಳಾ ನಾಯ್ಡು


ಕೊಪ್ಪಳ, ಮಹಿಳೆಯರ ಮೇಲೆ ಅತ್ಯಾಚಾರ, ಬಲತ್ಕಾರ, ಗೃಹ ಬಂಧನಗಳAತಹ ಹಲವಾರು ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿದ್ದು, ಈ ಕುರಿತು ಸಿಡಿಪಿಓ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದವರು ಸೇರಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹೇಳಿದರು.  
ಅವರು ಗುರುವಾರದಂದು (ಸೆಪ್ಟೆಂಬರ್.10 ರಂದು) ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  
ಇಂದು ಆತ್ಮಹತ್ಯೆ ತಡೆಗಟ್ಟುವ ದಿನವಾಗಿದ್ದು, ಮಹಿಳೆಯರು ಹಲವಾರು ಶೋಷಣೆಗಳಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ರಾಜ್ಯದಲ್ಲಿ ಕಂಡುಬರುತ್ತಿವೆ.  ಹಾಗಾಗಿ ಹೆಣ್ಣು ಮಕ್ಕಳು ಚೆನ್ನಾಗಿ ಓದಿ ಮುಂದೆ ಬರಬೇಕು.  ಅದಕ್ಕಾಗಿಯೇ ಕೇಂದ್ರ ಸರ್ಕಾರವು “ಬೇಟಿ ಬಚಾವೋ, ಬೇಟಿ ಪಡಾವೋ” ದಂತಹ ಹಲವಾರು ಯೋಜನೆಗಳು ಮಹಿಳಾ ಜಾಗೃತಿಗಾಗಿ ಜಾರಿಗೆ ತಂದಿದೆ.  ಮಹಿಳೆಯರು ಜಾಗೃತರಾದಾಗ ಮಾತ್ರ ತಮ್ಮ ಮೇಲೆ ನಡೆಯುವ ಶೋಷಣೆಗಳಿಂದ ಮುಕ್ತರಾಗಬಹುದು.  ವಿಶೇಷವಾಗಿ ಗ್ರಾಮೀಣ ಭಾಗದ ಅನಕ್ಷರಸ್ಥ ಮಹಿಳೆಯರು ಶೋಷಣೆಗೆ ಬಲಿಯಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು  ಎಂದರು.
ಲಾಕ್‌ಡೌನ್ ಸಮಯದಲ್ಲಿ ಮಹಿಳೆಯರ ಮೇಲೆ ಶೋಷಣೆಯಾಗಿರುವುದರ ಕುರಿತು ಹಲವಾರು ದೂರುಗಳು ಬಂದಿವೆ.  ಹಾಗಾಗಿ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರಿಗೆ ಜಾಗೃತಿ ಮೂಡಿಸಬೇಕು.  
ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಪೊಲೀಸ್‌ರಿಗೆ ರಾತ್ರಿ  ಸಮಯದಲ್ಲಿ ಅವರಿಗೆ ಭದ್ರತೆ ಒದಗಿಸುವುದು ಅತ್ಯವಶ್ಯಕವಾಗಿದ್ದು, ಆದಷ್ಟು ಅವರಿಗೆ ರಾತ್ರಿ ವೇಳೆಯ ಕರ್ತವ್ಯಕ್ಕಿಂತ ಹಗಲಿನ ಕಾರ್ತವ್ಯಕ್ಕೆ ಆಧ್ಯತೆ ನೀಡಬೇಕು ಎಂದು ಸಭೆಯಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.  
ಜಿಲ್ಲೆಯಲ್ಲಿ ಸ್ವಾಧಾರಗೃಹ ಮತ್ತು ಮಹಿಳಾ ಸ್ವಾಂತ್ವಾನ ಕೇಂದ್ರಗಳು ಇರಲೇಬೆಕು.  ದೇವದಾಸಿ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.  
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error