ಸರಸ್ವತಿ ವಿದ್ಯಾಮಂದಿರ ಶಾಲೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರಥಮ ಬಹುಮಾನ

ಕೊಪ್ಪಳ : ಜಿಲ್ಲಾಡಳಿತ ಹಮ್ಮಿಕೊಂಡಿದ್ದ 72 ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು . ಇದರಲ್ಲಿ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿವಿಧತೆಯಲ್ಲಿ ಏಕತೆ ಹಾಗೂ ಡೊಳ್ಳು ಕುಣಿತ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರಥಮ ಬಹುಮಾನ ಪಡೆಯಿತು . ಮಕ್ಕಳಿಗೆ ಪ್ರಥಮ ಬಹುಮಾನವನ್ನು ಜಿಲ್ಲಾಡಳಿತ ವತಿಯಿಂದ ನೀಡಲಾಯಿತು , ಈ ಸಂದರ್ಭದಲ್ಲಿ ಸಂಸ್ಥೆಯ ಆರ್.ಎಚ್.ಅತ್ತನೂರ, ರೇಣುಕಾ‌ಅತ್ತನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error