3ನೇ ದಿನಕ್ಕೆ ಕಾಲಿಟ್ಟ ಮುಷ್ಕರ : ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ೩ನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಇಡೀ ರಾಜ್ಯದ ಎಲ್ಲ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಸಾರಿಗೆ ನೌಕರರ ಮುಷ್ಕರದ ಬಗ್ಗೆ ಅರಿವಿಲ್ಲದೇ ಬಂದ ಜನ ಬಸ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಜನರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನ ಮಾಲೀಕರು ದರ ಏರಿಸಿಕೊಂಡಿದ್ದಾರೆ. ಇದರಿಂದ ಜನ ಸಾಮಾನ್ಯರು ಪರದಾಡುವಂತಾಗಿದೆ. ಸಾರಿಗೆ ನೌಕರರು ಬಸ್ ನಿಲ್ದಾಣದ ಬಳಿಯೂ ಬರುತ್ತಿಲ್ಲ. ಇಂದು ಬಸ್ ಸಂಚಾರ ಆರಂಭವಾಗುವದು ಮತ್ತಷ್ಟು ಅಸಾಧ್ಯ ಎನ್ನುವಂತಾಗಿದೆ. ಒಂದೆಡೆ ಸರಕಾರ ಸಂಧಾನ ನಡೆಸುತ್ತಿದ್ದರೆ ಇನ್ನೊಂದೆಡೆ ಕುಟುಂಬ ಸಮೇತರಾಗಿ ಪ್ರತಿಭಟನೆ ನಡೆಸಲು ನೌಕರರು ಮುಂದಾಗಿದ್ದಾರೆ.

Please follow and like us:
error