ಸಾಲಮನ್ನಾ ಮಾಜಿ ಸಿಎಂ ಕುಮಾರಸ್ವಾಮಿ ಸಹಾಯವಾಣಿ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಸಹಾಯವಾಣಿ ಆರಂಭಿಸುವ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ . ಸಾಲಮನ್ನಾ ಸೇರಿದಂತೆ ರೈತರಿಗೆ ಸಂಬಂಧಿಸಿದ ಮಾಹಿತಿ 
ನೀಡುವ ಸಲುವಾಗಿ ಸಹಾಯವಾಣಿ ಕೇಂದ್ರ ಪ್ರಾರಂಭಿಸಲಾಗಿದೆ . ರೈತರು ಸಹಾಯವಾಣಿಗೆ ಕರೆ ಮಾಡಿ ಬೆಳೆ ಸಾಲಮನ್ನಾ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ . ಸೋಮವಾರ ಈ ಬಗ್ಗೆ ಟ್ವಿಟ್ ಮಾಡಿರುವ ಕುಮಾರಸ್ವಾಮಿ , ಪ್ರತಿದಿನ ನೂರಾರು ರೈತರು ಬೆಳೆ ಸಾಲಮನ್ನಾ ಬಗ್ಗೆ ಮಾಹಿತಿಗಾಗಿ ನನ್ನ ಮನೆಗೆ ಆಗಮಿಸುತ್ತಲೇ ಇರುತ್ತಾರೆ . ದೂರದ ಊರಿನಿಂದ ಬರುವ ರೈತರಿಗೆ ಕಷ್ಟವಾಗಬಾರದು ಎಂದು ಸಹಾಯವಾಣಿ ಆರಂಭಿಸಿದ್ದೇನೆ . ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ 9164305868 ನಂಬರ್‌ಗೆ ಕರೆ ಮಾಡಬಹುದು , ಸಾಲಮನ್ನಾದ ವಿವರ ಪಡೆಯಬಹುದು ಎಂದು ತಿಳಿಸಿದ್ದಾರೆ . 

ಅ HD Kumaraswamy @ hd _ kumaraswamy ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ . ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ ಬೆಳೆಸಾಲಮನ್ನಾ ಸಹಾಯವಾಣಿ ‘ ಆರಂಭಿಸಿದ್ದೇನೆ . ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು

Please follow and like us:
error