ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ದೊಡ್ಡ ಶೂನ್ಯ- ಬಿ.ಸಿ‌. ಪಾಟೀಲ್ ಸಿದ್ದರಾಮಯ್ಯ ಪರ ಬ್ಯಾಟಿಂಗ್

-ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಬಿಗ್ ಝೀರೋ

ಕೊಪ್ಪಳ: ಬಿಜೆಪಿ ಅವರು ನನ್ನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

ಕೊಪ್ಪಳದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಬಿಜೆಪಿ ಅವರು ನನ್ನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ದೊಡ್ಡ ಶೂನ್ಯ. ಇದನ್ನು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ.
ಅವರು ಚಾಲ್ತಿಯಲ್ಲಿದ್ದಾರೆ, ಅದಕ್ಕೆ ಅವರ ಬಗ್ಗೆ ಮಾತನಾಡ್ತಾರೆ. ಇನ್ನುಳಿದವರ ಚಾಲ್ತಿಯಲ್ಲಿ ಇಲ್ಲ ಅದಕ್ಕೆ ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.

Please follow and like us:
error