ಸಿದ್ದರಾಮಯ್ಯ , ಗುಂಡೂರಾವ್ ರಾಜೀನಾಮೆ ಅಂಗೀಕರಿಸದಂತೆ ವರಿಷ್ಠರಲ್ಲಿ ಪುಷ್ಪಾ ಅಮರನಾಥ್ ಮನವಿ

ಮೈಸೂರು  : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ 

ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಕರ್ನಾಟಕ ರಾಜ್ಯ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ . ಪುಷ್ಪಾ ಅಮರನಾಥ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಮತ್ತು ಕರ್ನಾಟಕ ಉಸ್ತುವಾರಿ ಕೆ . ಸಿ . ವೇಣುಗೋಪಾಲ್ ಅವರಲ್ಲಿ ಮನವಿ ಮಾಡಿದ್ದಾರೆ . ಈ ಸಂಬಂಧ ನವದೆಹಲಿಯಲ್ಲಿ ಕರ್ನಾಟಕ ಉಸ್ತುವಾರಿ ಕೆ . ಸಿ . ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಅವರು , ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಬಾರದು . ಉಪಚುನಾವಣೆ ಸೂಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದು ಸರಿಯಲ್ಲ . ಹಾಗಾಗಿ ಇದನ್ನು ಪರಿಶೀಲನೆ ನಡೆಸಿ ರಾಜೀನಾಮೆ ಅಂಗೀಕರಿಸಬಾರದು ಎಂದು ಹೇಳಿದ್ದಾರೆ .

Please follow and like us:
error