ಕೊಪ್ಪಳ, : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್-ಇನ್ಸ್ಪೆಕ್ಟರ್(ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಜನವರಿ.22 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಫೆಬ್ರವರಿ.22 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳು ರೂ.500 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು ರೂ.250 ಗಳನ್ನು ಅಧಿಕೃತ ಬ್ಯಾಂಕ್ ಶಾಖೆಗಳ/ಅಂಚೆ ಕಚೇರಿಗಳಲ್ಲಿ ಕಚೇರಿ ಸಮಯದಲ್ಲಿ ಅರ್ಜಿ ಶುಲ್ಕ ಪಾವತಿಸಬೇಕು.
ನೇಮಕಾತಿಗೆ ಸಂಬAಧಿಸಿದ ಸೂಚನೆ, ಅಧಿಸೂಚನೆ, ಅರ್ಹತಾ ಷರತ್ತುಗಳು ಮತ್ತು ಅರ್ಜಿ ಸಲ್ಲಿಕೆಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್- www.recruitment.ksp.gov.in ಗೆ ಭೇಟಿ ನೀಡಿ, ಅರ್ಜಿಗಳನ್ನು ಕಡ್ಡಾಯವಾಗಿ ಆನ್ಲೈನ್ ನಲ್ಲಿಯೇ ಸಲ್ಲಿಸಬೇಕು ಹಾಗೂ ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
