fbpx

ಸೆ. 17 ರಂದು ಕೊಪ್ಪಳದಲ್ಲಿ 73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ


ಕೊಪ್ಪಳ, : ಕೊಪ್ಪಳ ಜಿಲ್ಲಾಡಳಿತ ವತಿಯಿಂದ 73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್. 17 ರಂದು ಬೆಳಿಗ್ಗೆ 09-00 ಗಂಟೆಗೆ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.  
ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು.  ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಭಾಗವಹಿಸುವರು.  
73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಮತ್ತು ಸನ್ಮಾನ ಕಾರ್ಯಕ್ರಮ ಜರುಗಲಿದೆ.  ಸಮಾರಂಭದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

Please follow and like us:
error
error: Content is protected !!