ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನ

ಬೆಂಗಳೂರು : ತಮ್ಮ ಬರಹ ಹಾಗೂ ಧ್ವನಿಯಿಂದ ಇಡೀ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಹಿರಿಯ ಪತ್ರಕರ್ತ , ಹಾಯ್ ಬೆಂಗಳೂರು ಟ್ಯಾಬ್ಲಾಯ್‌ನ ಪ್ರಧಾನ ಸಂಪಾದಕ ರವಿ ಬೆಳಗೆರೆ ( 62 ) ಶುಕ್ರವಾರ ಬೆಳಗಿನ ಜಾವ ನಿಧನರಾದರು . ಹೃದಯಾಘಾತದಿಂದ ಅವರು ನಿಧನರಾದರು . 1995 ರಲ್ಲಿ ಹಾಯ್ ಬೆಂಗಳೂರು ಆರಂಭಿಸಿದ್ದರು . ಕಾದಂಬರಿ , ಅನುವಾದ , ಕಥಾ ಸಂಕಲನ , ಅಂಕಣ ಬರಹಗಳು , ಜೀವನ ಕಥನ ಒಳಗೊಂಡ ಅವರ ಸುಮಾರು 70 ಪುಸ್ತಕಗಳು ಪ್ರಕಟಗೊಂಡಿವೆ . ರಾಜ್ಯೋತ್ಸವ ಪ್ರಶಸ್ತಿ , ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ , ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ . ಪ್ರಾರ್ಥನಾ ಶಾಲೆ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದಾಗಿ ತಿಳಿದು ಬಂದಿದೆ . ಅವರಿಗೆ ಇಬ್ಬರು ಪತ್ನಿಯರು , ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ . ತಡರಾತ್ರಿ ಹೃದಯಾಘಾತ ಆದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು . ಆದರೆ , ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧರಾದರು . ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ .

Please follow and like us:
error