ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ

ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹರವರ ನಿಧನನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ಏರೋಸ್ಪೇಸ್, ಮೋಡಗಳ ರಚನೆ, ಫ್ಲೂಯಿಡ್ ಡೈನಮಿಕ್ಸ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ತರ ಸಂಶೋಧನೆ ನಡೆಸಿದ್ದ 87 ವರ್ಷದ ಪ್ರೊ.ರೊದ್ದಾಂ ನರಸಿಂಹರವರು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದರು. ಒಂದು ತಿಂಗಳಿನಿಂದಲೂ ಮೆದುಳಿನ ರಕ್ತಸ್ರಾವ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

Please follow and like us:
error