ಹಿರೇವಡ್ರಕಲ್ಲದಲ್ಲಿ ಗ್ರಾಮ ವಾಸ್ತವ್ಯ
ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿ : ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ, : ಕೊಪ್ಪಳ ಜಿಲ್ಲಾಡಳಿತದಿಂದ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯಲಬುರ್ಗಾ ತಾಲ್ಲೂಕು ಆಡಳಿತ ಇವರ ಸಹಯೋಗದಲ್ಲಿ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಡ್ರಕಲ್ಲ ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ’’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  
ಬೇರೆ-ಬೇರೆ ಇಲಾಖೆಗಳ ಮಳಿಗೆಗಳನ್ನು ಹಿರೇವಡ್ರಕಲ್ಲ ಗ್ರಾಮದಲ್ಲಿ ಹಾಕಲಾಗಿದ್ದು, ಈ ಮಳಿಗೆಗಳಲ್ಲಿ ಊರಿನ ಪರವಾಗಿ ಅಥವಾ ಗ್ರಾಮಕ್ಕೆ ಸಂಬAಧಿಸಿದ ಸಮಸ್ಯೆಗಳ ಬಗ್ಗೆ ಆಯಾ ಇಲಾಖೆಗಳ ಮಳಿಗೆಗಳಲ್ಲಿ ಅರ್ಜಿ ಸಲ್ಲಿಸಬಹುದು.  ಬಳಿಕ ಆ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು.  ನಾವು ಇದ್ದಲ್ಲಿಗೆ ಬಂದು ಅರ್ಜಿಗಳನ್ನು ಸಲ್ಲಿಸದಿರಿ.  ನಾವು ನಿಮ್ಮ-ನಿಮ್ಮ ಓಣಿಗಳಿಗೆ ಹಾಗೂ ವಾರ್ಡ್ಗಳಿಗೆ ಆಗಮಿಸಿದಾಗ ನಿಮ್ಮ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತನ್ನಿ ಎಂದರು.
ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.  ಕೋವಿಡ್-19 ಹರಡದಂತೆ ಮುಂಜಾಗೃತೆ ವಹಿಸಬೇಕು.  ವಿವಿಧ ಇಲಾಖೆಗಳಿಗೆ ಸಂಬAಧಿಸಿದ ವೈಯಕ್ತಿಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಪ್ರಯತ್ನ ಮಾಡುತ್ತೇವೆ.  ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಎಂದು ಘೋಷವಾಕ್ಯವಿದೆ.  ಆದರೆ ಕೇವಲ ಜಿಲ್ಲಾಧಿಕಾರಿ ಮಾತ್ರ ನಿಮ್ಮ ಗ್ರಾಮಕ್ಕೆ ಬಂದಿಲ್ಲ.  ಬದಲಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡAತೆ ಇಡೀ ಜಿಲ್ಲಾಡಳಿತವೇ ನಿಮ್ಮ ಗ್ರಾಮಕ್ಕೆ ಬಂದಿದೆ.  ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರೆಲ್ಲರೂ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಯಲಬುರ್ಗಾ ತಹಶೀಲ್ದಾರ ಶ್ರೀಶೈಲ್ ತಳವಾರ, ಹಿರೇವಡ್ರಕಲ್ಲ ಗ್ರಾ.ಪಂ. ಅಧ್ಯಕ್ಷೆ ನಿಂಗಮ್ಮ, ಡಿ.ಎಫ್.ಓ ಹರ್ಷಬಾನು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೆರೆ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಮಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಎಸ್.ಬಿ. ದಾನರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.  

Please follow and like us:
error